ಲೋಕ ಸಮರದಲ್ಲಿ ಮಂಕಾದ ಕಾಂಗ್ರೆಸ್: ಈ ಬಾರಿ ಅತೀ ಕಡಿಮೆ ಕ್ಷೇತ್ರಗಳಲ್ಲಿ ಸ್ಪರ್ಧೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದೇಶದಲ್ಲಿ ಲೋಕಸಭೆ ಚುನಾವಣೆ ಕಾವು ಏರುತ್ತಿದ್ದು, ಎಲ್ಲೆಡೆ ಅಭ್ಯರ್ಥಿಗಳು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಇತ್ತ ದೇಶವನ್ನು ಅತ್ಯಧಿಕ ಕಾಲ ಆಡಳಿತ ನಡೆಸಿದ್ದ ಕಾಂಗ್ರೆಸ್ (Congres) ಪಕ್ಷ ಹಿಂದೆಂದೂ ಇಲ್ಲದ ರೀತಿಯಲ್ಲಿ ಈ ಬಾರಿಯ ಚುನಾವಣೆಯಲ್ಲಿ ಅತ್ಯಂತ ಕಡಿಮೆ ಸಂಖ್ಯೆಯ ಸ್ಥಾನಗಳಲ್ಲಿ ಕಾಂಗ್ರೆಸ್ ಸ್ಪರ್ಧೆ ಮಾಡುತ್ತಿದೆ.

ಕೇವಲ 326 ಲೋಕಸಭೆ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ತೀರ್ಮಾನಿಸಿರುವ ಕಾಂಗ್ರೆಸ್ ಈವರೆಗೂ 281 ಅಭ್ಯರ್ಥಿಗಳನ್ನಷ್ಟೇ ಪ್ರಕಟಿಸಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಬಲವಾಗಿರುವ ಎನ್‌ಡಿಎ (NDA) ಒಕ್ಕೂಟವನ್ನು ಏಕಾಂಗಿಯಾಗಿ ಎದುರಿಸಿ ಗೆಲ್ಲುವುದು ಕಷ್ಟ ಸಾಧ್ಯ ಎಂದು ಅರಿತಿರುವ ಕಾಂಗ್ರೆಸ್ ವಿವಿಧ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಂಡಿದೆ.

ಕರ್ನಾಟಕ, ತೆಲಂಗಾಣ, ಪಂಜಾಬ್, ಛತ್ತೀಸ್‌ಗಡ, ಉತ್ತರಾಖಂಡ್, ಹಿಮಾಚಲಪ್ರದೇಶ, ಗೋವಾ, ಅರುಣಾಚಲ ಪ್ರದೇಶ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ ಮತ್ತು ಆರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಾತ್ರ ಎಲ್ಲಾ ಸ್ಥಾನಗಳಲ್ಲಿ ಸ್ಪರ್ಧೆ ಮಾಡಿದೆ.

ಉಳಿದ ರಾಜ್ಯಗಳಲ್ಲಿ ಮಿತ್ರಪಕ್ಷಗಳ ಜೊತೆ ಸೀಟು ಹಂಚಿಕೊಂಡಿದೆ. ಉತ್ತರಪ್ರದೇಶ(80), ಮಹಾರಾಷ್ಟ್ರ (48), ಬಿಹಾರ(40) ಮತ್ತು ತಮಿಳುನಾಡು(39) ಒಟ್ಟು 207 ಸ್ಥಾನಗಳಿದ್ದು, ಈ ಪೈಕಿ ಕೇವಲ 52ರಲ್ಲಿ ಮಾತ್ರ ಕಾಂಗ್ರೆಸ್ ಸ್ಪರ್ಧೆ ಮಾಡಿದೆ. ಅಂದರೆ 25.12%ರಷ್ಟು ಕಡೆ ಮಾತ್ರ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ.

ಒಡಿಶಾ, ಆಂಧ್ರ, ಬಂಗಾಳದಲ್ಲಿ ಕಾಂಗ್ರೆಸ್ ಪ್ರಭಾವ ಎಲ್ಲಿದೆ ಎಂದು ಹುಡುಕಬೇಕಿದೆ. 326ರಲ್ಲಿ ಸ್ಪರ್ಧೆ ಮಾಡಿದರೂ ಕೂಡ ಕಾಂಗ್ರೆಸ್ ಪ್ರಭಾವ ಕೆಲವೇ ರಾಜ್ಯಗಳಿಗೆ ಸೀಮಿತವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!