ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಪಕ್ಷ ಮತ್ತು ಭ್ರಷ್ಟಾಚಾರ ಒಂದೇ ನಾಣ್ಯದ ಎರಡು ಮುಖವಾಗಿದೆ. ಕಾಂಗ್ರೆಸ್ ಭ್ರಷ್ಟಾಚಾರವನ್ನು ಬಿಡುವುದಿಲ್ಲ, ಭ್ರಷ್ಟಾಚಾರ ಕಾಂಗ್ರೆಸ್ ಪಕ್ಷವನ್ನು ಬಿಡುತ್ತಿಲ್ಲ ಎಂದು ಎಂದು ಬಿಜೆಪಿ ಟೀಕಿಸಿದೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿಜೆಪಿ, ಬೇನಾಮಿ ಕಂಪನಿಗಳನ್ನು ಸೃಷ್ಟಿಸಿ ಅದರೊಂದಿಗೆ ವ್ಯವಹರಿಸಿ ಕೊನೆಗೆ ಸುಳ್ಳು ದಾಖಲೆ ಒದಗಿಸಿ ದೇಶದ ಸಂಪತ್ತನ್ನು ಲೂಟಿ ಹೊಡೆಯುವ ಸರಣಿ ಕೃತ್ಯಗಳನ್ನು ಕಾಂಗ್ರೆಸ್ ನಾಯಕರು ಮಾಡುತ್ತಲೇ ಬಂದಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಿಗೆ ತಾಕತ್ತಿದ್ದರೆ ನ್ಯಾಯಾಲಯದ ಮೂಲಕವೇ ಹೋರಾಡಲಿ, ಬೀದಿಗಳಿದು ಹೋರಾಡಿ ನ್ಯಾಯಾಂಗ ವ್ಯವಸ್ಥೆಯ ಹಾದಿ ತಪ್ಪಿಸಲು ಸಾಧ್ಯವಿಲ್ಲ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಪರಿವಾರ ₹2 ಸಾವಿರ ಕೋಟಿ ಲೂಟಿ ಹೊಡೆಯಲು ಸಂಚು ರೂಪಿಸಿತ್ತು ಎಂದು ಆರೋಪಿಸಿದೆ.