ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ “ಮೃತ್ಯುಕುಂಭ” ಹೇಳಿಕೆಗೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಪ್ರತಿಕ್ರಿಯಿಸಿದ್ದಾರೆ. ಅವರು ಕಾಂಗ್ರೆಸ್ ಅನ್ನು ಸನಾತನ ವಿರೋಧಿ ಪಕ್ಷ ಎಂದು ಬಣ್ಣಿಸಿದ್ದಾರೆ.
ಪ್ರಯಾಗ್‌ರಾಜ್‌ನ ಮಹಾಕುಂಭದಲ್ಲಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ನಂತರ ಮಾತನಾಡಿದ ಸಿಎಂ ಶರ್ಮಾ, “ಅವರು ಈ ರೀತಿ ಮಾತನಾಡಬಾರದಿತ್ತು, ನಾನು ಇಲ್ಲಿಗೆ ಬಂದು ಪಶ್ಚಿಮ ಬಂಗಾಳದ ಜನರ ಅಭಿವೃದ್ಧಿಗಾಗಿ ಪವಿತ್ರ ಸ್ನಾನ ಮಾಡುವಂತೆ ವಿನಂತಿಸುತ್ತೇನೆ. ಕಾಂಗ್ರೆಸ್ ಪಕ್ಷವು ಸಂತಾನ ವಿರೋಧಿಯಾಗಿದೆ, ಕಾಂಗ್ರೆಸ್ ಪಕ್ಷವು ಹೆಚ್ಚು ಕಾಲ ಇರುವುದಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ವಾಗ್ದಾಳಿ ನಡೆಸಿದ್ದಾರೆ.