ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದಲ್ಲಿ ತಮ್ಮ ಚುನಾವಣಾ ಪ್ರಚಾರದ ಎರಡನೇ ದಿನದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದು, ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಪಕ್ಷವು ಜಮ್ಮು ಮತ್ತು ಕಾಶ್ಮೀರದ ದಲಿತರ ಹಕ್ಕುಗಳನ್ನು ಕಸಿದುಕೊಂಡಿದೆ ಎಂದು ಆರೋಪಿಸಿದರು.
ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ವಿಭಜಕ ತಂತ್ರಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದರು ಮತ್ತು ಜನರು ಎಚ್ಚರದಿಂದಿರಬೇಕು ಎಂದು ಕಿವಿಮಾತು ಹೇಳಿದರು.
ಫರ್ಜಿವಾಡದಲ್ಲಿ ಕಾಂಗ್ರೆಸ್ ತನ್ನದೇ ದಾಖಲೆಯನ್ನು ಮುರಿದಿದೆ. ಕಾಂಗ್ರೆಸ್ ಪಕ್ಷವು ಅಬ್ಬರಿಸಿ ಹಂಚುತ್ತಿದ್ದ ಸಂವಿಧಾನದ ಲಾಲ್ ಕಿತಾಬ್ ನಲ್ಲಿ ಏನೂ ಇಲ್ಲ ಎಂಬುದಿದೆ. ಅದು ಖಾಲಿ ಪುಸ್ತಕವಾಗಿತ್ತು. ಇದು ಕಾಂಗ್ರೆಸ್ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮೇಲಿನ ದ್ವೇಷ ಕಾಂಗ್ರೆಸ್ ನ ಈ ಮೂರ್ಖ ಮತ್ತು ದುರದೃಷ್ಟಕರ ರಾಜಕೀಯ ನಾಟಕದಿಂದ ಇಡೀ ದೇಶವೇ ಆಘಾತಕ್ಕೊಳಗಾಗಿದೆ ಎಂದು ನಾಂದೇಡ್ ನಲ್ಲಿ ನಡೆದ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ.