ಕಾಂಗ್ರೆಸ್ ಪಕ್ಷ ಡ್ರೈವರ್ ಇಲ್ಲದ ಬಸ್ ಆಗಿದೆ: ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಲೇವಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಹಿನಾಯ ಸೋಲು ಅನುಭವಿಸಿರುವ ಕಾಂಗ್ರೆಸ್ ಪಕ್ಷ, ಡ್ರೈವರ್ ಇಲ್ಲದ ಬಸ್ ತರಹ ಆಗಿದೆ ಎಂದು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಲೇವಡಿ ಮಾಡಿದ್ದಾರೆ.
ನಗರದ ಐವನ್ ಇ ಶಾಹಿ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಗುರುವೂ ಇಲ್ಲ, ಗುರಿಯೂ ಇಲ್ಲ.ಪ್ರಾದೇಶಿಕ ಪಕ್ಷಗಳನ್ನು ಕೊಲ್ಲಲು ಸಾಕಷ್ಟು ಪ್ರಯತ್ನ ಮಾಡಿದ್ದ ಕಾಂಗ್ರೆಸ್ ಇಂದು ಹಿನಾಯ ಸೋಲು ಅನುಭವಿಸಿದೆ ಎಂದರು.
ಜೆಡಿಎಸ್ ಪಂಚರತ್ನ ರಥಯಾತ್ರೆ ಯಶಸ್ವಿಯಾಗಿ ಸಾಗುತ್ತಿದೆ. ಇಡೀ ರಾಜ್ಯಾದ್ಯಂತ ನಡುರಾತ್ರಿ 3 ಗಂಟೆಯಾದರೂ ಹಳ್ಳಿಗಳಲ್ಲಿ ಸ್ವಾಗತ ಕೋರುತ್ತಿದ್ದಾರೆ. ಮೊನ್ನೆ ಶಿರಾ ದಲ್ಲಿ ಮುಸ್ಲಿಂ ಮಹಿಳೆಯರು ಪಂಚರತ್ನ ಯಾತ್ರೆಯನ್ನು ಮಧ್ಯರಾತ್ರಿ 2 ಗಂಟೆಗೆ ಅದ್ದೂರಿಯಾಗಿ ಸ್ವಾಗತ ಮಾಡಿದ್ದಾರೆ ಎಂದರು.
2024ರ ಲೋಕಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಗಳು ಅಧಿಕಾರಕ್ಕೆ ಬರಲಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ನೆಲಕಚ್ಚಲಿವೆ. ಅದೇ ರೀತಿ ಮುಂಬರುವ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಸಹ ಜೆಡಿಎಸ್ ಸ್ವಂತ ಬಲದ ಮೇಲೆ 100 ಸ್ಥಾನಗಳನ್ನು ದಾಟಿ ಅಧಿಕಾರ ಪಡೆದು, ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಹೇಳಿದರು.
ಬಿಜೆಪಿ ಅಂಗಾಂಗಗಳು ಕುಸಿದು ಬಿದ್ದಿದ್ದು, ಈ ಚುನಾವಣೆಯ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೋಗುತ್ತಾರೆ. ಆರ್.ಎಸ್.ಎಸ್.ಆಂತರಿಕ ಸರ್ವೆಯೂ ಸಹ ಬಿಜೆಪಿ ಪಕ್ಷ 50 ಸ್ಥಾನ ದಾಟುವುದಿಲ್ಲ ಎಂದು ಹೇಳಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!