June 30, 2026
Tuesday, June 30, 2026
spot_img

ಕಾಂಗ್ರೆಸ್ ಪಕ್ಷ ಸುಳ್ಳು ಭರವಸೆಗಳ ಅಂಗಡಿ: ಅಸ್ಸಾಂನಲ್ಲಿ ಪ್ರಧಾನಿ ಮೋದಿ ವಾಗ್ದಾಳಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ಪಕ್ಷ ಸುಳ್ಳು ಭರವಸೆಗಳ ಅಂಗಡಿಯಾಗಿದ್ದು, ಅವರು ಒಂದು ಸುಳ್ಳು ಹೇಳಿದರೆ ಅದರ ಜೊತೆ ನಾಲ್ಕು ಸೂಪರ್-ಸುಳ್ಳುಗಳನ್ನು ಬೋನಸ್ ಆಗಿ ನೀಡುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಾಗ್ದಾಳಿ ನಡೆಸಿದ್ದಾರೆ.

ಅಸ್ಸಾಂ ನ ಗುವಾಹಟಿ ಮತ್ತು ಕೊಕ್ರಝಾರ್‌ನಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಗಳನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಪಶ್ಚಿಮ ಏಷ್ಯಾದ ಯುದ್ಧದ ಪರಿಸ್ಥಿತಿಯನ್ನು ಬಳಸಿಕೊಂಡು ತೈಲ ಮತ್ತು ಎಲ್‌ಪಿಜಿ ಬೆಲೆಗಳ ಬಗ್ಗೆ ಕಾಂಗ್ರೆಸ್ ದೇಶದ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ಪಕ್ಷವು ಯಾವಾಗಲೂ ಒಳನುಸುಳುಕೋರರಿಗೆ ಬೆಂಬಲ ನೀಡುತ್ತಾ ಬಂದಿದ್ದು, ಬುಡಕಟ್ಟು ಜನಾಂಗದವರ ಭೂಮಿಯನ್ನು ಅಕ್ರಮವಾಗಿ ನುಸುಳುಕೋರರಿಗೆ ಹಸ್ತಾಂತರಿಸಲಾಗಿತ್ತು. ಆದರೆ ಈಗ ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಸರ್ಕಾರ ಆ ಭೂಮಿಯನ್ನು ಮರಳಿ ಪಡೆಯಲು ಶ್ರಮಿಸುತ್ತಿದೆ ಎಂದು ಹೇಳಿದರು.

ದಶಕಗಳ ಕಾಲ ಬೋಡೋಲ್ಯಾಂಡ್ ಹಿಂಸಾಚಾರ ಮತ್ತು ಕಷ್ಟಗಳನ್ನು ಅನುಭವಿಸಿತ್ತು.ಆದರೆ ಈಗ ಇಲ್ಲಿ ಶಾಂತಿ ಮತ್ತು ಪ್ರಗತಿಯ ಹೊಸ ಅಧ್ಯಾಯ ಆರಂಭವಾಗಿದೆ ಎಂದ ಮೋದಿ, ಬೋಡೋಲ್ಯಾಂಡ್ ಪ್ರದೇಶದ ಅಭಿವೃದ್ಧಿಗಾಗಿ ಸುಮಾರು 4,500 ಕೋಟಿ ರೂ.ಗಳ ಯೋಜನೆಗಳನ್ನು ಘೋಷಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !