ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಶಾ ಫೌಂಡೇಶನ್‌ನಲ್ಲಿ ನಡೆದ ಮಹಾ ಶಿವರಾತ್ರಿ ಆಚರಣೆಗೆ ಭೇಟಿ ನೀಡಿದ ಕುರಿತು ಗದ್ದಲದ ನಡುವೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ, ಸಮಾಜದ ಎಲ್ಲರನ್ನು ಒಟ್ಟಿಗೆ ಕೊಂಡೊಯ್ಯುವುದು ಕಾಂಗ್ರೆಸ್ ಪಕ್ಷದ ಸಿದ್ಧಾಂತವಾಗಿದೆ ಎಂದು ಹೇಳಿದ್ದಾರೆ.
“ನಾನು ಎಲ್ಲಾ ಧರ್ಮ, ಎಲ್ಲಾ ಜಾತಿಗಳನ್ನು ನಂಬುತ್ತೇನೆ. ಸಮಾಜದಲ್ಲಿ ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವುದು ಕಾಂಗ್ರೆಸ್ ಪಕ್ಷದ ಸಿದ್ಧಾಂತವಾಗಿದೆ. ಹಾಗಾಗಿ, ನಾನು ಭಿನ್ನಾಭಿಪ್ರಾಯ ಹೊಂದಿಲ್ಲ. ಕೆಲವರು ಇಷ್ಟಪಡಬಹುದು, ಕೆಲವರು ಇಷ್ಟಪಡದಿರಬಹುದು” ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ನಂತರ ಮಾತನಾಡಿದ ಅವರು, ಸದ್ಗುರುಗಳು ಕರ್ನಾಟಕದವರು. ಕಾವೇರಿ ನೀರಿನ ವಿಚಾರವಾಗಿ ಹೋರಾಟ ನಡೆಸುತ್ತಿದ್ದಾರೆ. ಖುದ್ದಾಗಿ ಬಂದು ನನ್ನನ್ನು ಆಹ್ವಾನಿಸಿದ್ದಾರೆ. ಅಪಾರ ಅಭಿಮಾನಿಗಳಿದ್ದಾರೆ. ಕೆಲವು ಮಹತ್ತರ ಕೆಲಸ ಮಾಡುತ್ತಿದ್ದಾರೆ. ವಿವಿಧ ರಾಜಕೀಯ ಪಕ್ಷಗಳ ಶಾಸಕರು, ಮುಖಂಡರು ಇದ್ದರು. ಹಾಗಾಗಿ ನಾನು ಅಲ್ಲಿಗೆ ಹೋಗಿದ್ದೆ. ಇದು ನನ್ನ ವೈಯಕ್ತಿಕ ನಂಬಿಕೆ ಎಂದು ಸ್ಪಷ್ಟನೆ ನೀಡಿದ್ದಾರೆ.