Tuesday, March 28, 2023

Latest Posts

ಬಂಧನಕ್ಕೊಳಗಾಗಿದ್ದ ಕಾಂಗ್ರೆಸ್ ಪವನ್ ಖೇರಾಗೆ ಕೆಲವೇ ಗಂಟೆಗಳಲ್ಲಿ ಸಿಕ್ಕಿತು ಮಧ್ಯಂತರ ಜಾಮೀನು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಅಸ್ಸಾಂ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಕಾಂಗ್ರೆಸ್ ಹಿರಿಯ ನಾಯಕ ಪವನ್ ಖೇರಾಗೆ ಸುಪ್ರೀಂಕೋರ್ಟ್ (SupremeCourt) ಜಾಮೀನು ನೀಡಿದೆ.

ಜಾಮೀನು (Bail) ಕೋರಿ ಅರ್ಜಿ ಸಲ್ಲಿಸುವವರೆಗೂ ಮಧ್ಯಂತರ ಜಾಮೀನು ನೀಡಲು ದ್ವಾರಕ ನ್ಯಾಯಾಲಯಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.

ಇಂದು ದೆಹಲಿ ವಿಮಾನ ನಿಲ್ದಾಣ (Delhi Airport) ದಲ್ಲಿ ಪವನ್ ಖೇರಾ ಅವರನ್ನು ಬಂಧಿಸುತ್ತಿದ್ದಂತೆ ಸುಪ್ರೀಂಕೋರ್ಟ್ ನಲ್ಲಿ ವಿಚಾರವನ್ನು ಪ್ರಸ್ತಾಪಿಸಲಾಯಿತು.

ಈ ವೇಳೆಖೇರಾ ವಕೀಲ ಅಭಿಷೇಕ್ ಮನುಸಿಂಘ್ವಿ (Abhishek Manu Singhvi) ದೇಶದ್ಯಾಂತ ದಾಖಲಾಗುತ್ತಿರುವ ಎಫ್‍ಐಆರ್‍ಗಳನ್ನು ಒಂದೂಗೂಡಿಸಬೇಕು ಮತ್ತು ಖೇರಾಗೆ ಮಧ್ಯಂತರ ಜಾಮೀನು ನೀಡುವಂತೆ ಮನವಿ ಮಾಡಿದರು.
ವಾದ ಆಲಿಸಿದ ಬಳಿಕ ಸಿಜೆಐ ಪೀಠ ಮಧ್ಯಂತರ ಜಾಮೀನು ನೀಡಲು ಸೂಚಿಸಿ, ಎಫ್‍ಐಆರ್ ಗಳನ್ನು ಕ್ಲಬ್ ಮಾಡುವ ಅಭಿಪ್ರಾಯ ತಿಳಿಸುವಂತೆ ಅಸ್ಸಾಂ ಮತ್ತು ಉತ್ತರಪ್ರದೇಶ ಪೊಲೀಸರಿಗೆ ನೋಟಿಸ್ ಜಾರಿ ಮಾಡಿತು. ಮುಂದಿನ ವಿಚಾರಣೆ ವೇಳೆಗೆ ಉತ್ತರಿಸಲು ಪೀಠ ಸೂಚಿಸಿದೆ.

ಪವನ್ ಖೇರಾ ವಿರುದ್ಧ ಐಪಿಸಿ ಸೆಕ್ಷನ್ 153 ಎ ಧರ್ಮ, ಜನಾಂಗ, ಜನ್ಮಸ್ಥಳ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸೆಕ್ಷನ್ 295 ಎ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಯಾವುದೇ ವರ್ಗದ ಧರ್ಮವನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಅಪರಾಧಗಳನ್ನು ದಾಖಲಿಸಲಾಗಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!