ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯರನ್ನು ಮುಗಿಸಲು ಕಾಂಗ್ರೆಸ್ ಪ್ಲಾನ್: ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಮುಗಿಸಲು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿ ಎಲ್ಲರೂ ಯತ್ನ ನಡೆಸಿದ್ದಾರೆ ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಸಿದ್ದರಾಮಯ್ಯ ಅವರನ್ನು ಮುಗಿಸಲು ಕಾಂಗ್ರೆಸ್ ನಿಂದಲೇ ಯತ್ನ ನಡೆದಿದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯನವರನ್ನು ಹೇಗೆ ಮುಗಿಸಿದ್ದಾರೆ ಎಂಬುದು ಗೊತ್ತಿಲ್ಲವೇ? ಕಳೆದ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಗಿಸಿದ್ರು. ಈಗ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರನ್ನು ಮುಗಿಸಲು ಏನು ಹುನ್ನಾರ ನಡೆಸಿದ್ದಾರೆ ಎಂಬುದು ಗೊತ್ತಿದೆ ಎಂದರು.
ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಯತ್ನಿಸಿದ ಕಾಂಗ್ರೆಸ್ ನವರೇ ಬಿಜೆಪಿ ಬಗ್ಗೆ ಆರೋಪ ಮಾಡುವ ಅಗತ್ಯವಿಲ್ಲ. ಅವರ ಆರೋಪಕ್ಕೆ ಉತ್ತರ ಕೊಡಬೇಕಾಗಿಯೂ ಇಲ್ಲ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!