ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆ: ಸೆ.30 ರಂದು ನಾಮಪತ್ರ ಸಲ್ಲಿಸಲಿರುವ ಶಶಿ ತರೂರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಸಂಸದ ಶಶಿ ತರೂರ್ ಅವರುಸೆ. 30 ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಮೂಲಕ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರೊಂದಿಗೆ ಪಕ್ಷದ ಮುಖ್ಯಸ್ಥರ ಹುದ್ದೆಯ ಸ್ಪರ್ಧೆಗೆ ಇಳಿದಿದ್ದಾರೆ.
ತರೂರ್ ಅವರು ವಿವಿಧ ರಾಜ್ಯಗಳ ಪ್ರತಿನಿಧಿಗಳನ್ನು ಸಂಪರ್ಕಿಸುತ್ತಿದ್ದು, ಐದು ಸೆಟ್ ನಾಮನಿರ್ದೇಶನ ಪತ್ರಗಳನ್ನು ತೆಗೆದುಕೊಂಡಿದ್ದಾರೆ. ಇದಕ್ಕಾಗಿ ಅವರಿಗೆ ತಮ್ಮ ಉಮೇದುವಾರಿಕೆಗೆ 50 ಪ್ರತಿನಿಧಿಗಳ ಅಗತ್ಯವಿದೆ.
ಅಲ್ಲದೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸದಿರಲು ನಿರ್ಧರಿಸಿದ ನಂತರ, 24 ವರ್ಷಗಳ ನಂತರ ಗಾಂಧಿಯೇತರರು ಕಾಂಗ್ರೆಸ್ ಅಧ್ಯಕ್ಷ ಸ್ತಾನದ ಚುಕ್ಕಾಣಿ ಹಿಡಿಯಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!