ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಉದ್ಯಮಿಗಳಿಗೆ ಐದು ಲಕ್ಷದವರೆಗೆ ಬಡ್ಡಿ ರಹಿತ ಸಾಲ ಸೇರಿದಂತೆ ಐದು ಗ್ಯಾರಂಟಿಗಳನ್ನು ನೀಡುವುದಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಘೋಷಿಸಿದ್ದಾರೆ.
ದಕ್ಷಿಣ ಕಾಶ್ಮೀರದಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ನಡೆಸಿದ ನಡೆಸಿದ ಖರ್ಗೆ, ಮಹಿಳಾ ಉದ್ಯಮಿಗಳಿಗೆ 5 ಲಕ್ಷದವರೆಗೆ ಬಡ್ಡಿ ರಹಿತ ಸಾಲ, ಪ್ರತಿ ಕುಟುಂಬಕ್ಕೆ 25 ಲಕ್ಷ ಆರೋಗ್ಯ ವಿಮೆ, ಕುಟುಂಬದ ಯಜಮಾನಿಗೆ ಮಾಸಿಕ 3,000 ಹಣ, ಜೊತೆಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ಪ್ರತಿ ವ್ಯಕ್ತಿಗೆ 11 ಕೆಜಿ ಧಾನ್ಯಗಳನ್ನು ನೀಡುವ ಯೋಜನೆಯ ಮರುಜಾರಿ ಮಾಡುವುದಾಗಿ ಭರವಸೆ ನೀಡಿದರು.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಭರವಸೆ ನೀಡಿದಂತೆ ವಲಸೆ ಕಾಶ್ಮೀರ ಪಂಡಿತರಿಗೆ ಪುನರ್ವಸತಿ ಕಲ್ಪಿಸಲಾಗುವುದು. ಅಲ್ಲದೆ, ಒಬಿಸಿ ಸಮುದಾಯದವರು ಕೂಡ ಸಂವಿಧಾನದಲ್ಲಿ ನಮೂದಿಸಿದಂತೆ ಹಕ್ಕುಗಳನ್ನು ಸಹ ಪಡೆಯಲಿದ್ದಾರೆ ಎಂದು ಖರ್ಗೆ ಭರವಸೆ ನೀಡಿದರು.
ಜಮ್ಮು ಮತ್ತು ಕಾಶ್ಮೀರದಲ್ಲಿ ಒಂದು ಲಕ್ಷ ಉದ್ಯೋಗಗಳು ಖಾಲಿ ಇವೆ .ನಾವು ಈ ಖಾಲಿ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ. ಅವರು ಯಾವುದೇ ಉದ್ಯಮವನ್ನು ತಂದಿಲ್ಲ, ಆದ್ದರಿಂದ ಉದ್ಯೋಗ ಸೃಷ್ಟಿ ಇಲ್ಲ. ನಾವು ಪ್ರವಾಸೋದ್ಯಮ ಮತ್ತು ಉತ್ಪಾದನೆಯತ್ತ ಗಮನ ಹರಿಸುತ್ತೇವೆ. ಕಳೆದ ಹಲವಾರು ವರ್ಷಗಳಿಂದ 4,400 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲಾಗಿದೆ. ನಾವು ಗಮನಹರಿಸುವಂತೆ ನಾವು ಅವುಗಳನ್ನು ಮತ್ತೆ ತೆರೆಯುತ್ತೇವೆ. ಶಿಕ್ಷಣ’ ಎಂದು ಹೇಳಿದರು.