Sunday, November 27, 2022

Latest Posts

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಸೋನಿಯಾ ಗಾಂಧಿ ಬೆಂಬಲದ ವದಂತಿಗಳನ್ನು ತಳ್ಳಿಹಾಕಿದ ಖರ್ಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇದೇ ತಿಂಗಳ 17ರಂದು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಬೆಂಬಲ ನೀಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ, ಈ ಪ್ರಚಾರದಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೋನಿಯಾ ಗಾಂಧಿ ನನ್ನ ಹೆಸರನ್ನು ಸೂಚಿಸಿದ್ದಾರೆ ಎಂಬ ಸುದ್ದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ. ಸೋನಿಯಾ ಗಾಂಧಿ ಈಗಾಗಲೇ ಒಂದು ವಿಷಯವನ್ನು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಯಲ್ಲಿ ಗಾಂಧಿ ಕುಟುಂಬದಿಂದ ಯಾರೂ ಸ್ಪರ್ಧಿಸುವುದಿಲ್ಲ, ಮತ್ತು ಯಾರನ್ನೂ ಬೆಂಬಲಿಸುವುದಿಲ್ಲ ಎಂದಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಈಗ ಹರಿದಾಡುತ್ತಿರುವ ಸುದ್ದಿಯಲ್ಲಿ ಸತ್ಯಾಂಶವಿಲ್ಲ ಎಂದರು.

ಸೋನಿಯಾ ಗಾಂಧಿ, ನನಗೆ ಬೆಂಬಲ ನೀಡುತ್ತಿದ್ದಾರೆ ಎಂದು ಕೆಲವರು ಸುಳ್ಳು ಪ್ರಚಾರ ಮಾಡಿ ಕಾಂಗ್ರೆಸ್, ಸೋನಿಯಾ ಗಾಂಧಿ ಹಾಗೂ ತನಗೆ ಕೆಟ್ಟ ಹೆಸರು ತರಲು ಯತ್ನಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಪ್ರತಿನಿಧಿಗಳು ಯಾರಿಗೆ ಮತ ಹಾಕುತ್ತಾರೋ ಅವರೇ ಪಕ್ಷದ ಅಧ್ಯಕ್ಷರಾಗುತ್ತಾರೆ. ದೇಶದ ಸದ್ಯದ ಪರಿಸ್ಥಿತಿ ನೋಡಿ ಈ ಸ್ಪರ್ಧೆಗೆ ನಿಂತಿದ್ದೇನೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!