Friday, March 24, 2023

Latest Posts

ಸ್ಯಾಂಕಿ ಮೇಲ್ಸೇತುವೆ ನಿರ್ಮಾಣ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ: ಹಲವರ ಪೊಲೀಸ್ ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಬಾಷ್ಯಂ ಸರ್ಕಲ್ ನಲ್ಲಿ ಸ್ಯಾಂಕಿ ಮೇಲ್ಸೇತುವೆ ನಿರ್ಮಾಣ ವಿರೋಧಿಸಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದ್ದು, ಈ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ನೇತೃತ್ವದ ಮುಖಂಡರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸ್ಯಾಂಕಿ ರಸ್ತೆ ವಿಸ್ತರಣೆ ಮತ್ತು 60 ಕೋಟಿ ರೂಪಾಯಿ ವೆಚ್ಚದ ಮೇಲ್ಸೇತುವೆ ಕಾಮಗಾರಿಯನ್ನು ನಿಲ್ಲಿಸುವಂತೆ ಒತ್ತಾಯಿಸಿದರು. ಪೊಲೀಸರು ಪ್ರತಿಭಟನಾಕಾರರನ್ನು ಸ್ಥಳದಿಂದ ತೆರಳುವಂತೆ ಎಚ್ಚರಿಸಿದರು, ಆದರೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.ಮುಂಜಾಗ್ರತಾ ಕ್ರಮವಾಗಿ ಕೆಲವು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ತೆಗೆದುಕೊಂಡರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!