Wednesday, June 7, 2023

Latest Posts

ಭಾಲ್ಕಿಯಲ್ಲಿ ಕಾಂಗ್ರೆಸ್ ಜನ ಕ್ರಾಂತಿ ರ್‍ಯಾಲಿ: ಬಿಜೆಪಿ, ಆರೆಸ್ಸೆಸ್ ವಿರುದ್ಧ ರಾಗಾ ಟೀಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬಾಲ್ಕಿಯಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿರುವ ಕಾಂಗ್ರೆಸ್ ಜನಕ್ರಾಂತಿ ರ್ಯಾಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೆಸ್ಸೆಸ್ ಹಾಗೂ ಜಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಆರೆಸ್ಸೆಸ್ ಹಾಗೂ ಬಿಜೆಪಿ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ದಾಳಿ ನಡೆಸುತ್ತಿದೆ. ಸಮಾನತೆ ಮರೆಯಾಗುತ್ತಿದೆ. ಇಂದು ದೇಶದಲ್ಲಿ ದ್ವೇಷ ಹೆಚ್ಚುತ್ತಿದೆ, ಶಾಂತಿ ಮರೆಯಾಗುತ್ತಿದ್ದು, ಬಡವರ ಹಣ ಕಿತ್ತುಕೊಂಡು ಶ್ರೀಮಂತರಿಗೆ ನೀಡುವ ಕೆಲಸವಾಗುತ್ತಿದೆ. ಈ ಮೂಲಕ ದೇಶದಲ್ಲಿ ಪ್ರಜಾಪ್ರಭುತ್ವ ಮಾರ್ಗ ತೋರಿದ ಬಸವಣ್ಣನವರ ಎಲ್ಲರಿಗೂ ಸಮಬಾಳು, ಎಲ್ಲರಿಗೂ ಸಮಪಾಲು ವಿಚಾರಧಾರೆಗಳ ಮೇಲೆ ದೌರ್ಜನ್ಯಗಳಾಗುತ್ತಿದೆ ಎಂದು ರಾಹುಲ್ ಆರೋಪಿಸಿದರು.

ಯಾವುದೇ ಸುಳ್ಳು ಭರವಸೆಗಳನ್ನು ಮತದಾರರ ಮುಂದಿಡದಂತೆ ಸೂಚಿಸಿದ್ದೇನೆ. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ನೀಡಿರುವ ಆಶ್ವಾಸನೆಗಳನ್ನು ಆಧಿಕಾರಕ್ಕೆ ಬಂದ ಮೊದಲ ದಿನವೇ ಕಾರ್ಯರೂಪಕ್ಕೆ ತರಲಿದೆ ಎಂದು ಅವರು ಭಾಷಣದುದ್ದಕ್ಕೂ ಬಿಜೆಪಿ ಆಡಳಿತವನ್ನು ಟೀಕಿಸಿದರು.

ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ, ರಾಜು ಘಟಕದ ಅಧ್ಯಕ್ಷ ಪುಷ್ಪಾ ಅಮರನಾಥ್, ಭಾಲ್ಕಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಈಶ್ವರ ಖಂಡ್ರೆ ಬೀದರ್ ಶಾಸಕ ರಹೀಂ ಖಾನ್ ಮತ್ತಿತರ ಮುಖಂಡರು ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!