ಹೊಸದಿಗಂತ ಡಿಜಿಟಲ್ ಡೆಸ್ಕ್ :
ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದ ಕಾಂಗ್ರೆಸ್ ಹೈಕಮಾಂಡ್, ಇಂದು 42 ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.
ಎರಡನೇ ಪಟ್ಟಿಯಲ್ಲಿ ಕೂಡ ಕೋಲಾರ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸುವ ಕುರಿತು ಇನ್ನೂ ಪಕ್ಷ ತೀರ್ಮಾನ ಕೈಗೊಂಡಿಲ್ಲ.
ಧಾರವಾಡ ಗ್ರಾಮೀಣ ಕ್ಷೇತ್ರದಿಂದ ವಿನಯ್ ಕುಲಕರ್ಣಿ, ಬಾದಾಮಿಯಿಂದ ಬಿ ಬಿ ಚಿಮ್ಮನಕಟ್ಟಿ ಸೇರಿ 42 ಅಭ್ಯರ್ಥಿಗಳಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆಯಾಗಿದೆ. ಯಾವ ಕ್ಷೇತ್ರಕ್ಕೆ ಯಾರು ಎನ್ನುವ ವಿವರ ಇಲ್ಲಿದೆ.