Tuesday, December 6, 2022

Latest Posts

ಗುಜರಾತ್ ಚುನಾವಣೆ: ಕಾಂಗ್ರೆಸ್‌ನಿಂದ 37 ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಗುಜರಾತ್ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ 37 ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಂತಿಮ ಪಟ್ಟಿಯೊಂದಿಗೆ, 182 ಸದಸ್ಯ ಬಲದ ಗುಜರಾತ್ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 179 ಅಭ್ಯರ್ಥಿಗಳನ್ನು ಘೋಷಿಸಿದೆ.
ಸನಂದ್‌ನಿಂದ ರಮೇಶ್ ಕೋಲಿ, ಖಂಭಾತ್‌ನಿಂದ ಚಿರಾಗ್ ಅರವಿಂದಭಾಯ್ ಪಟೇಲ್, ದಾಹೋದ್ (ಎಸ್‌ಟಿ), ಹರ್ಷದ್‌ಭಾಯ್ ನಿನಾಮ ಪಾಲನ್‌ಪುರದಿಂದ ಮಹೇಶ್ ಪಟೇಲ್, ದಿಯೋದ್ರಾದಿಂದ ಶಿವಭಾಯಿ ಭೂರಿಯಾ ಮತ್ತು ಕಂಕ್ರೋಜ್‌ನಿಂದ ಅಮೃತಭಾಯ್ ಆಬ್ಜಿ ಥಾಕ್ರೋ ಅವರಿಗೆ ಪಕ್ಷ ಟಿಕೆಟ್ ನೀಡಿದೆ.

ಇಲ್ಲಿವರೆಗೂ ಗುಜರಾತ್‌ ಚುನಾವಣೆಗೆ ಕಾಂಗ್ರೆಸ್‌ 126 ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದಾರೆ. ನವೆಂಬರ್‌ 4ರಂದು 43 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಬಳಿಕ ನವೆಂಬರ್‌ 11ರಂದು 46 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. 182 ಸದಸ್ಯ ಬಲದ ರಾಜ್ಯ ವಿಧಾನಸಭೆಗೆ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮತಗಳ ಎಣಿಕೆ ಡಿಸೆಂಬರ್ 8 ರಂದು ನಡೆಯಲಿದೆ.

ಗುಜರಾತ್ ಚುನಾವಣೆಗೆ ಪಕ್ಷವು ಈಗಾಗಲೇ ತನ್ನ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಪ್ರಕಟಿಸಿದೆ. ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಪಕ್ಷದ ಸಂಸದ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್, ಸಚಿನ್ ಪೈಲಟ್, ಜಿಗ್ನೇಶ್ ಮೇವಾನಿ, ಕನ್ಹಯ್ಯಾ ಕುಮಾರ್ ಅವರು ಪಕ್ಷದ ಸ್ಟಾರ್ ಪ್ರಚಾರಕರಾಗಿದ್ದಾರೆ.

ಈ ಪಟ್ಟಿಯಲ್ಲಿ ಮಧ್ಯಪ್ರದೇಶದ ಮಾಜಿ ಸಿಎಂಗಳಾದ ಕಮಲ್ ನಾಥ್ ಮತ್ತು ಕಾಂಗ್ರೆಸ್ ರಾಜ್ಯಸಭಾ ಸಂಸದ ದಿಗ್ವಿಜಯ ಸಿಂಗ್ ಅವರ ಹೆಸರೂ ಇದೆ. ಈ ಪಟ್ಟಿಯಲ್ಲಿ ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಕೂಡ ಇದ್ದಾರೆ.

25 ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಕಾಂಗ್ರೆಸ್ ಹವಣಿಸುತ್ತಿದ್ದು, ಅಮ್ ಆದ್ಮಿ ಪಕ್ಷದಿಂದಲೂ ಪಕ್ಷಕ್ಕೆ ಸವಾಲು ಎದುರಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!