ಅಲ್ಪಸಂಖ್ಯಾತರ ಓಲೈಕೆ ಮೂಲಕ ಕಾಂಗ್ರೆಸ್ ಗಲಭೆ ಪ್ರಚೋದಿಸುತ್ತಿದೆ: ಜಗದೀಶ್ ಶೆಟ್ಟರ್ ಆಕ್ರೋಶ

ಹೊಸದಿಗಂತ ವರದಿ, ವಿಜಯನಗರ:
ಅಲ್ಪಸಂಖ್ಯಾತರ ಓಲೈಕೆ ಮೂಲಕ ಕಾಂಗ್ರೆಸ್ ಗಲಭೆಗೆ ಪ್ರಚೋದನೆ ನೀಡುತ್ತಿದೆ. ಇದು ದುಷ್ಕರ್ಮಿಗಳಿಗೆ ಮತ್ತಷ್ಟು ಬಲ ನೀಡುತ್ತಿದೆ. ಕಾಂಗ್ರೆಸ್‌ ಓಲೈಕೆ ರಾಜಕಾರಣ ನಿಲ್ಲಿಸಲು ಎಂದು  ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಆಗ್ರಹಿಸಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ-ಧಾರವಾಡ ಅವಳಿ ನಗರ ಕಳೆದ 20ವರ್ಷಗಳಿಂದ ಶಾಂತಿಗೆ ಹೆಸರಾಗಿದೆ. ಎಲ್ಲ ಧರ್ಮದವರೂ ಶಾಂತಿ ಸಹಬಾಳ್ವೆಯಿಂದ ನಡೆದಿದ್ದೇವೆ, ಇಂತಹದರಲ್ಲಿ ಕಾಂಗ್ರೆಸ್ ‌ನವರು ಸಣ್ಣ ಸಮಸ್ಯೆಯನ್ನು ದೊಡ್ಡದು ಮಾಡಿ, ಅಲ್ಪಸಂಖ್ಯಾತರನ್ನು ಒಲೈಸಿಕೊಳ್ಳಲು ಹೊರಟಿದೆ, ಅವರ ಕನಸು ಎಂದೂ ನನಸಾಗುವುದಿಲ್ಲ. ಎಲ್ಲರೂ ಈಗ ಕಾಗ್ರೆಸ್‌ ಕೃತ್ಯಗಳನ್ನು ಅರ್ಥೈಸಿಕೊಳ್ಳುವಷ್ಟು ಬುದ್ಧಿವಂತರಿದ್ದಾರೆ ಎಂದು ಕೈ ನಾಯಕರ ವಿರುದ್ದ ಹರಿಹಾಯ್ದರು.
ಯುವಕನೊಬ್ಬ ಧರ್ಮದ ಬಗ್ಗೆ ಅವಹೇಳಕನಕಾರಿ ರೀತಿಯಲ್ಲಿ ಪೋಸ್ಟ್ ಮಾಡಿದ್ದ, ಸ್ಟೇಟಸ್ ಇಟ್ಟುಕೊಂಡಿದ್ದ ಎಂಬ ಆರೋಪ ಕೇಳಿಬಂದ ತಕ್ಷಣವೇ ಪೊಲೀಸರ ಆತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿ ಕ್ರಮಕ್ಕೆ ಮುಂದಾಗಿದ್ದಾರೆ. ಹೀಗಿರುವಾಗ ಪೊಲೀಸರ ‌ಮೇಲೆ ಹಲ್ಲೆ, ಕಲ್ಲು ತೂರಾಟ, ಹುಬ್ಬಳ್ಳಿಯ ಶ್ರೀ ಮಾರುತಿ ದೇಗುಲ ದ್ವಂಸ, ಕಲ್ಲು ತೂರಾಟ ನಡೆಸಿರುವುದು ಅಕ್ಷಮ್ಯ ಅಪರಾಧವಾಗಿದೆ.
ಯಾರೇ ಇರಲಿ ತಪ್ಪು ಮಾಡಿದರೇ ಶಿಕ್ಷೆ ಇದ್ದೇ ಇರಲಿದೆ. ಅದನ್ನು ಬಿಟ್ಟು ಕಾನೂನನ್ನು ಕೈಗೆ ತೆಗೆದುಕೊಳ್ಳುವುದು ಸರಿಯಲ್ಲ. ಪೋಸ್ಟ್ ಮಾಡಿದ ವ್ಯಕ್ತಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದರೂ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಆಗುವ ರೀತಿಯಲ್ಲಿ ನಡೆದುಕೊಳ್ಳುವುದು ಸರಿಯಲ್ಲ. ಮುಸ್ಲೀಂ ಬಾಂಧವರು‌ ಶ್ರೀ ಮಾರುತಿ ದೇಗುಲದ ಮೇಲೆ ‌ಕಲ್ಲು ತೂರಾಟ ಮಾಡುವುದು, ಹಿಂದೂಗಳ ಮನೆ ಮೇಲೆ ಕಲ್ಲು ತೂರಾಡುವ ಅಗತ್ಯವಿತ್ತಾ ಎಂದು ಪ್ರಶ್ನಿಸಿದರು.
ಇದೆಲ್ಲ ಕಾಂಗ್ರೆಸ್ ನವರ ಕುತಂತ್ರ ಬುದ್ದಿ, ಅವರಿಗೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ, ಈ ಹಿಂದೆ ನಡೆದ ಡಿಜೆ ಹಳ್ಳಿ, ಕೆಜಿ ಹಳ್ಳಿ ದಾಂದಲೆ ಪ್ರಕರಣದಲ್ಲಿ ಕಾಂಗ್ರೆಸ್ ನವರ ಕೈವಾಡವಿದೆ, ಪ್ರಕರಣದ ಆರೋಪಿ ಕೈ ನಾಯಕರೇ ಇದ್ದರೂ ಕಾಂಗ್ರೆಸ್ ಸುಮ್ಮನೆ ಕುಳಿತಿದೆ, ಶಾಂತಿ ಸುವ್ಯವಸ್ಥೆಗೆ ದಕ್ಕೆ ತರುವ ಕೆಲಸ ಯಾರೇ‌ ಮಾಡಿದರೂ ಖಂಡಿತ ಕ್ರಮ ಕೈಗೊಳ್ಳಲಾಗುವುದು, ನಮ್ಮ ಸರ್ಕಾರ ಸುಮ್ಮನೆ ಕುಳಿತಿಲ್ಲ, ಇಂತಹ ಘಟನೆಗಳು‌ ಮತ್ತೆ‌ ಮರುಕಳಿಸದಂತೆ ಅಗತ್ಯ ಕ್ರಮಕೈಗೊಳ್ಳಲಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!