ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆಯಲ್ಲಿ ರಾಮಲಲಾ ಪ್ರಾಣಪ್ರತಿಷ್ಠೆ ಹಿನ್ನೆಲೆ ಸೋಮವಾರ (ಜನವರಿ 22) ರಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ನೇತೃತ್ವದ ಕಾಂಗ್ರೆಸ್ ಸರ್ಕಾರವು ಹಿಮಾಚಲ ಪ್ರದೇಶದಲ್ಲಿ ಸಾರ್ವಜನಿಕ ರಜೆ ಘೋಷಿಸಿದೆ.
ಐತಿಹಾಸಿಕ ಸಂದರ್ಭದಲ್ಲಿ ರಜೆಯನ್ನು ಘೋಷಿಸಿದ ಮೂರರಲ್ಲಿ ಹಿಮಾಚಲ ಪ್ರದೇಶವು ಮೊದಲ ಕಾಂಗ್ರೆಸ್ ಆಡಳಿತದ ರಾಜ್ಯವಾಗಿದೆ ಎಂಬುದು ಇಲ್ಲಿ ಉಲ್ಲೇಖಾರ್ಹ.ಕರ್ನಾಟಕ ಮತ್ತು ತೆಲಂಗಾಣದಲ್ಲಿ ಆಡಳಿತಾರೂಢ ಕಾಂಗ್ರೆಸ್ ಇನ್ನೂ ರಜೆ ಘೋಷಿಸಿಲ್ಲ.
ಅಯೋಧ್ಯೆಯಲ್ಲಿ ರಾಮಲಲಾ ಪ್ರಾಣಪ್ರತಿಷ್ಠೆಯ ಸಂದರ್ಭದಲ್ಲಿ ಹಿಮಾಚಲ ಪ್ರದೇಶದಲ್ಲಿ ಎಲ್ಲಾ ಶಿಕ್ಷಣ ಸಂಸ್ಥೆಗಳು(ಶಾಲೆಗಳು, ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳು) ಮತ್ತು ರಾಜ್ಯ ಸರ್ಕಾರಿ ಕಚೇರಿಗಳು ಮುಚ್ಚಲ್ಪಡುತ್ತವೆ. 22ನೇ ಜನವರಿ 2024 ರ ಪೂರ್ಣ ದಿನವನ್ನು(ಸೋಮವಾರ) ಎಲ್ಲಾ ವಿಭಾಗಗಳು/ಬೋರ್ಡ್‌ಗಳು/ಕಾರ್ಪೊರೇಷನ್‌ಗಳು/ಶಾಲೆಗಳು/ಕಾಲೇಜುಗಳು/ವಿಶ್ವವಿದ್ಯಾಲಯಗಳು/ಇತ್ಯಾದಿಗಳಲ್ಲಿ ಸಾರ್ವಜನಿಕ ರಜಾದಿನವಾಗಿ ಆಚರಿಸಲಾಗುತ್ತದೆ ಎಂದು ಹಿಮಾಚಲ ಪ್ರದೇಶ ಸರ್ಕಾರ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದೆ.
ಈಗಾಗಲೇ ಉತ್ತರ ಪ್ರದೇಶ, ಮಹಾರಾಷ್ಟ್ರ, ಗೋವಾ, ಹರಿಯಾಣ, ಒಡಿಶಾ, ರಾಜಸ್ಥಾನ, ಅಸ್ಸಾಂ ಮತ್ತು ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳ ಸರ್ಕಾರವು ಸಮಾರಂಭದ ಸಂದರ್ಭದಲ್ಲಿ ಅರ್ಧ ದಿನದ ರಜೆಯನ್ನು ಘೋಷಿಸಿದೆ. ಆಯಾ ರಾಜ್ಯಗಳಲ್ಲಿನ ಎಲ್ಲಾ ಸರ್ಕಾರಿ ಕಚೇರಿಗಳು ಮಧ್ಯಾಹ್ನ 2.30 ರವರೆಗೆ ಮುಚ್ಚಲ್ಪಡುತ್ತವೆ.