ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಕಾಂಗ್ರೆಸ್ ಸಾಧನಾ ಸಮಾವೇಶ ನಡೆಯಲಿದೆ.
ಮೈಸೂರಿನ ಮಹಾರಾಜ ಮೈದಾನದಲ್ಲಿ ಇಂದು ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ.
ಈ ಹಿನ್ನೆಲೆಯಲ್ಲಿ ಸಾಧನ ಸಮಾವೇಶಕ್ಕೆ ಬೃಹತ್ ವೇದಿಕೆ ಸಜ್ಜಾಗಿದ್ದು, ಇಂದು ನಡೆಯಲಿರುವ ಸಾಧನಾ ಸಮಾವೇಶಕ್ಕೆ ಭರ್ಜರಿ ತಯಾರಿ ನಡೆಸಲಾಗುತ್ತಿದೆ. ಮಹಾರಾಜ ಮೈದಾನದಲ್ಲಿ ಜರ್ಮನ್ ಟೆಂಟ್ ನಲ್ಲಿ ನಿರ್ಮಾಣವಾದ ಬೃಹತ್ ಗಾತ್ರದ ವೇದಿಕೆ ನಿರ್ಮಾಣ ಮಾಡಲಾಗಿದೆ.
ನಾಳೆ ಕಾಂಗ್ರೆಸ್ ನಾಯಕರು ಶಕ್ತಿ ಪ್ರದರ್ಶನ ಮಾಡಲಾಗಿದ್ದು, ಮೈಸೂರಿನ ಈ ಬಾರಿ ವಿಶೇಷವಾಗಿ ವೇದಿಕೆ ಸಜ್ಜಾಗಿದೆ. ವೇದಿಕೆಯ ಮಧ್ಯದಲ್ಲಿ ಸಿಎಂ ಸಿದ್ದರಾಮಯ್ಯ ನಡೆದುಕೊಂಡು ಹೋಗೋದಕ್ಕೆ ಸ್ಪೆಷಲ್ ಟ್ರ್ಯಾಕ್ ನಿರ್ಮಿಸಲಾಗಿದ್ದು, ಸುಮಾರು 200 ಮೀಟರ್ ನಡೆದುಕೊಂಡು ಹೋಗಬೇಕಾಗುತ್ತದೆ.
ಇನ್ನು ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳ ಕುರಿತು ಕಲಾಕೃತಿ ತಯಾರಿ ಮಾಡಲಾಗಿದ್ದು, ಕೃಷಿ ಅಧಿಕಾರಿಗಳಿಂದ ಚಿತ್ತಾಕರ್ಷಕ ರಂಗೋಲಿ ಸಿದ್ಧವಾಗುತ್ತಿದೆ. ಸಮಾವೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಬರುವ ನಿರೀಕ್ಷೆ ಇದೆ. ಸಮಾವೇಶದ ವೇಳೆ ಅವಘಡ ಸಂಭವಿಸದಂತೆ ಪೊಲೀಸರು ಫುಲ್ ಹೈ ಅಲರ್ಟ್ ಆಗಿದ್ದಾರೆ.