ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ 1924ರಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೊತ್ಸವ ಅಂಗವಾಗಿ ನಗರದ ಟಿಳಕವಾಡಿಯಲ್ಲಿನ ವೀರಸೌಧದಲ್ಲಿ ಮಹಾತ್ಮ ಗಾಂಧೀಜಿ ನೂತನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಗುರುವಾರ ಅನಾವರಣಗೊಳಿಸಿದರು. ಇದರೊಂದಿಗೆ ‘ಗಾಂಧಿ ಭಾರತ’ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.
ಇದೇ ವೇಳೆ ವೀರಸೌಧದ ಆವರಣದಲ್ಲಿನ ಗಾಂಧಿ ಸ್ಮಾರಕ ಭವನದಲ್ಲಿನ ನವೀಕೃತ ಫೋಟೊ ಗ್ಯಾಲರಿಯನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು. ಬಳಿಕ ವೀರಸೌಧ ಆವರಣದಲ್ಲಿ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಜಂಟಿಯಾಗಿ ಸಸಿ ನೆಟ್ಟು ನೀರೆರೆದರು.