ಕಾಂಗ್ರೆಸ್ ಶಾಕ್ ಕೊಟ್ಟ ರಾಣಾ ಗೋಸ್ವಾಮಿ: ಪಕ್ಷಕ್ಕೆ ರಾಜೀನಾಮೆ ನೀಡಿದ ಅಸ್ಸಾಂ ಪ್ರಭಾವಿ ನಾಯಕ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ನಾಯಕ ರಾಣಾ ಗೋಸ್ವಾಮಿ ಅವರು ಬುಧವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ .

ಇತ್ತೀಚೆಗೆ ರಾಜ್ಯ ಕಾಂಗ್ರೆಸ್‌ನ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಗೋಸ್ವಾಮಿ ಅವರು ಜೋರ್ಹತ್‌ನ ಮಾಜಿ ಶಾಸಕರಾಗಿದ್ದಾರೆ.
ಇದೀಗ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ್ ಅವರಿಗೆ ರಾಜೀನಾಮೆ ಪತ್ರವನ್ನು ಕಳುಹಿಸಿದ ನಂತರ ಅವರು ದೆಹಲಿಗೆ ತೆರಳಿದ್ದು, ಅಲ್ಲಿ ಅವರು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಪಕ್ಷಕ್ಕೆ ಸೇರುವ ಸಾಧ್ಯತೆಯಿದೆ.

ಗೋಸ್ವಾಮಿ ಅವರು ಬಿಜೆಪಿ ಸೇರುತ್ತಾರೆ ಎಂಬ ಊಹಾಪೋಹಗಳ ಕುರಿತು ಮಂಗಳವಾರ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಅದರ ಬಗ್ಗೆ ಯಾವುದೇ ಮಾಹಿತಿ ಇಲ್ಲ, ಆದರೆ ಅವರು ಕಾಂಗ್ರೆಸ್‌ನ ಪ್ರಬಲ ನಾಯಕ ಮತ್ತು ಅವರು ಬಿಜೆಪಿಗೆ ಸೇರಿದರೆ ನಾನು ಅದನ್ನು ಸ್ವಾಗತಿಸುತ್ತೇನೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!