ಕಾಂಗ್ರೆಸ್‌ ಉಚಿತ ಭಾಗ್ಯಗಳಿಗೆ ಷರತ್ತು ವಿಧಿಸುವುದು ಸರಿಯಲ್ಲ: ಅಶ್ವತ್ಥನಾರಾಯಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ನೀಡಿದ್ದ​ ಗ್ಯಾರಂಟಿಗಳಿಗೆ ಈಗ ಷರತ್ತುಗಳನ್ನು ವಿಧಿಸುವುದು ಸರಿಯಲ್ಲ ಎಂದು ಮಾಜಿ ಸಚಿವ, ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆಂದು ಕಾಂಗ್ರೆಸ್ ಹೇಳಿತ್ತು. ಅವುಗಳಿಗೆ ಈಗ ಷರತ್ತುಗಳು ಅನ್ವಯ ಎಂದು ಹೇಳುತ್ತಿದ್ದಾರೆ. ಜನರಿಗೆ ನೀಡಿದ್ದ ಭರವಸೆಗಳನ್ನು ಕಾಂಗ್ರೆಸ್ ಈಡೇರಿಸಬೇಕು ಎಂದಿದ್ದಾರೆ.

ಚುನಾವಣೆ ಪ್ರಚಾರದ ವೇಳೆ ಗ್ಯಾರಂಟಿಗಳನ್ನು ಕಾಂಗ್ರೆಸ್ ಘೋಷಿಸಿತ್ತು. ಈಗ ಕಾಂಗ್ರೆಸ್ ನಾಯಕ ಜಿ. ಪರಮೇಶ್ವರ್ ಅವರು ಕಂಡೀಷನ್ಸ್ ಅಪ್ಲೈ ಅಂತ ಸ್ಟಾರ್ ಮಾರ್ಕ್ ಹಾಕಿದ್ದಾರೆ. ನನಗೂ ಭಾಗ್ಯ, ನಿನಗೂ ಭಾಗ್ಯ ಅಂತ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹೇಳಿದ್ದರು. ಸ್ಪಷ್ಟತೆಯಿಂದ ಎಲ್ಲರಿಗೂ ಮಾತು ಕೊಟ್ಟಿದ್ದಾರೆ. 200 ಯುನಿಟ್ ವಿದ್ಯುತ್ ಫ್ರೀ, ನಿರುದ್ಯೋಗ ಭತ್ಯೆ ಅಂತ 2000 ರೂ. ಘೋಷಿಸಿದ್ದರು. ಹೇಳಿದ್ದನ್ನು ಎಲ್ಲರಿಗೂ ಕೊಡಲಿ ಎಂದು ಅವರು ಆಗ್ರಹಿಸಿದ್ದಾರೆ.

ಹಳ್ಳಿಗಳಲ್ಲಿ ಕರೆಂಟ್ ಬಿಲ್ ಕಟ್ಟಲು ನಿರಾಕರಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್​​ನವರು ಹೇಳಿರುವುದನ್ನು ಈಗ ಜನ ಕೇಳುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಕರೆಂಟ್ ಬಿಲ್ ಕಟ್ಟುವಂತಿಲ್ಲ ಅಂತ ಹೇಳಿದ್ದರು,‌ ಅದಕ್ಕೆ ಕಟ್ಟುತ್ತಿಲ್ಲ. ನಾವು ಇದನ್ನು ಅಸ್ತ್ರ ಮಾಡಿಕೊಂಡಿಲ್ಲ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!