ಕಾಂಗ್ರೆಸ್ ಮುಳುಗುವ ಹಡಗು: ಎಚ್.ಓಬಳೇಶ್

ಹೊಸ ದಿಗಂತ ವರದಿ, ಬಳ್ಳಾರಿ:

ಪ್ರಧಾನಿ ಮೋದಿಜೀ ಅವರ ಹೊಡೆತಕ್ಕೆ ರಾಜ್ಯ ಸೇರಿದಂತೆ ದೇಶದಲ್ಲೇ ಕಾಂಗ್ರೆಸ್ ಶಕ್ತಿ ಕಳೆದುಕೊಂಡಿದೆ, ಅದು ಸದ್ಯ ಮುಳುಗುವ ಹಡಗು ಎಂದು ಬಿಜೆಪಿ ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ಎಚ್.ಓಬಳೇಶ್ ಅವರು ಹೇಳಿದರು.
ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬಿಜೆಪಿ ಎಸ್ಟಿ ಮೋರ್ಚಾದ ನೂತನ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ‌ವಹಿಸಿ ಮಾತನಾಡಿದರು. ವಿಧಾನಸಭೆ ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿದ್ದು, ಕಾಂಗ್ರೆಸ್ ನ ದುರಾಡಳಿತಕ್ಕೆ ರಾಜ್ಯದ ಜನರು ಪಾಠ ಕಲಿಸಲು ಮುಂದಾಗಿದ್ದರೇ, ಪಕ್ಷದ ಅನೇಕ ನಾಯಕರು ಕಾಂಗ್ರೆಸ್ ತೊರೆದು ಬಿಜೆಪಿ, ಜೆಡಿಎಸ್ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ, ಕೇಂದ್ರ ಹಾಗು ರಾಜ್ಯ ಸರ್ಕಾರದ ಜನಪರ ಆಡಳಿತವನ್ನು ಜನರು ಗಮನಿಸಿದ್ದು, ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ದೊರೆಯುವ ವಿಶ್ವಾಸವಿದ್ದು, ಮತ್ತೆ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಧಾನಿ‌ ಮೋದಿಜೀ ಅವರ ಹೊಡೆತಕ್ಕೆ ದೇಶದಲ್ಲೇ ಕಾಂಗ್ರೆಸ್ ತನ್ನ ಶಕ್ತಿ ಕಳೆದುಕೊಂಡಿದೆ. ರಾಜ್ಯ ಸೇರಿದಂತೆ ದೇಶದ ಬಹುತೇಕ ರಾಜ್ಯಗಳಲ್ಲಿ ಬಿಜೆಪಿ ಆಡಳಿತ ಚುಕ್ಕಾಣಿ ಹಿಡಿದಿದೆ. ಮೋದಿಜೀ ಅವರು ಪ್ರಧಾನಿಯಾದ ಬಳಿಕ ಇಲ್ಲಿವರೆಗೂ ಎಲ್ಲ ವರ್ಗದ ಜನರಿಗೂ ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದು, ದೇಶದ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅವಧಿಯಲ್ಲಿ ರೈತರ ಸಾಲ ಮನ್ನಾ ಸೇರಿದಂತೆ ಅನೇಕ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ಮಾದರಿಯಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ಸರಳ ಸಜ್ಜನಿಕೆಗೆ ಹೆಸರಾದ ನಾಯಕರಾಗಿದ್ದು, ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ದಿನವೇ ರೈತರ ಮಕ್ಕಳಿಗೆ ನಾನಾ ಯೋಜನೆಗಳನ್ನು ಘೋಷಿಸಿದ್ದಾರೆ, ಕಾಂಗ್ರೆಸ್ ನವರದು ಸಭೆ ಸಮಾರಂಭಗಳಲ್ಲಿ ‌ಮಾತ್ರ ಅಭಿವೃದ್ಧಿ ‌ಮಂತ್ರ, ನಮ್ಮದು ಹಾಗಲ್ಲ, ಸಭೆ ಸಮಾರಂಭಗಳಲ್ಲಿ ಜನರಿಗೆ ಸುಳ್ಳು ಹೇಳುವ ಸಂಸ್ಕೃತಿ ನಮ್ಮದಲ್ಲ, ನಮ್ಮದು ಏನಿದ್ದರೂ ಕಾಮ್ ಕೀ ಬಾತ್, ಸುಳ್ಳು ಹೇಳುವ ಪಕ್ಷ ನಮ್ಮದಲ್ಲ ಎಂದು ತಿಳಿಸಿದರು. ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆಯಾದ ಬಳಿಕ ಉಭಯ ಜಿಲ್ಲೆಗಳಿಗೂ ನೂತನ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಲಾಗಿದೆ, ಯುವ ಉತ್ಸಾಹಿ ಬಳ್ಳಾರಿ ಜಿಲ್ಲಾಧ್ಯಕ್ಷ ಗೋನಾಳ್ ಮುರಹರಗೌಡ ಅವರ ನೇತೃತ್ವದಲ್ಲಿ ಪಕ್ಷ ಸಂಘಟನೆಗೆ ಎಲ್ಲರೂ ಶ್ರಮಿಸೋಣ, ನಮ್ಮನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿದ್ದರೂ ಎಲ್ಲವನ್ನೂ ಮರೆತು ಪಕ್ಷ ಸಂಘಟನೆಗೆ ಶ್ರಮಿಸೋಣ ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಗೋನಾಳು ಮುರಹರಗೌಡ ಅವರು ಮಾತನಾಡಿದರು.ಬಿಜೆಪಿ ಎಸ್ ಟಿ ರಾಜ್ಯ ಕಾರ್ಯಕಾರಣಿ ಸದಸ್ಯ ಕೆ.ಎಸ್.ದಿವಾಕರ್, ಎಸ್ಟಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಶಿವ ಕುಮಾರ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿಲ್ ನಾಯ್ಡು ಮೋಕ, ಅಶೋಕ್ ಕುಮಾರ್, ಬಿಜೆಪಿ ಎಸ್ ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬೋಗರಾಜು, ಜಿಲ್ಲಾ ಉಪಾಧ್ಯಕ್ಷ ರಘು, ಓಬಳೇಶ್ , ಗಾಳಿ ಶಂಕ್ರಪ್ಪ, ಜಿಲ್ಲಾ ಕಾರ್ಯಲಯ ಕಾರ್ಯದರ್ಶಿ ಗಳು ರಾಮಕೃಷ್ಣ, ಕಮ್ಮರಚೆಡ್ ಅಂಜಿ ಸೇರಿದಂತೆ ಜಿಲ್ಲಾ ಕಾರ್ಯಕಾರಿಣಿ ಸದ್ಯಸರು ಇತರರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!