ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮ ದೇಹ ತೂಕದ ಬಗ್ಗೆ ಹೇಳಿಕೆ ನೀಡಿದ ರಾಷ್ಟ್ರೀಯ ವಕ್ತಾರೆ ಶಮಾ ಮೊಹಮ್ಮದ್ ಗೆ ಕಾಂಗ್ರೆಸ್ ಛೀಮಾರಿ ಹಾಕಿದೆ.
ಡಾ. ಶಮಾ ಮೊಹಮ್ಮದ್ ಹೇಳಿಕೆ ವೈಯಕ್ತಿಕವಾದದ್ದು, ಇದಕ್ಕೂ ಪಕ್ಷಕ್ಕೂ ಸಂಬಂಧವಿಲ್ಲ. ಪೋಸ್ಟ್ ಅನ್ನು ಡಿಲೀಟ್ ಮಾಡುವಂತೆ ಹೇಳಲಾಗಿದೆ ಎಂದು ಕಾಂಗ್ರೆಸ್ ನ ಮಾಧ್ಯಮ ಹಾಗೂ ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ತಿಳಿಸಿದ್ದಾರೆ.
ಜೊತೆಗೆ ಕಾಂಗ್ರೆಸ್, ಕ್ರೀಡಾ ದಿಗ್ಗಜರ ಕೊಡುಗೆಗಳನ್ನು ಅತ್ಯಂತ ಗೌರವದಿಂದ ಕಾಣುತ್ತದೆ. ಅವರ ಪರಂಪರೆಯನ್ನು ದುರ್ಬಲಗೊಳಿಸುವ ಯಾವುದೇ ಹೇಳಿಕೆಯನ್ನು ಅನುಮೋದಿಸುವುದಿಲ್ಲ ಎಂದು ಹೇಳಿದ್ದಾರೆ.
ಶಮಾ ತಮ್ಮ ತಮ್ಮ ಎಕ್ಸ್ ಖಾತೆಯಲ್ಲಿ ರೋಹಿತ್ ಶರ್ಮ ದಪ್ಪಗಿದ್ದಾರೆ, ತೂಕ ಕಳೆದುಕೊಳ್ಳಬೇಕಾಗಿದೆ! ಭಾರತ ಕಂಡ ಅತ್ಯಂತ ಪ್ರಭಾವಶಾಲಿಯಲ್ಲದ ನಾಯಕ ಎಂದು ಬರೆದುಕೊಂಡಿದ್ದರು.
ಇದಾದ ನಂತರ ಶಮಾ ತಮ್ಮ ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದಾರೆ.