ಸಿಎಎ ಕಾಯ್ದೆ ವಿರುದ್ಧದ ಕಾಂಗ್ರೆಸ್‌ನ ನಿಲುವು ‘ವೋಟ್ ಬ್ಯಾಂಕ್’ ರಾಜಕೀಯ: ಅಮಿತ್‌ ಶಾ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಪೌರತ್ವ ತಿದ್ದುಪಡಿ ಕಾಯ್ದೆ (CAA) ಅನುಷ್ಠಾನವನ್ನು ವಿರೋಧಿಸುತ್ತಿರುವ ಕಾಂಗ್ರೆಸ್‌ ವಿರುದ್ಧ ಕೇಂದ್ರ ಗೃಹ ಸಚಿವ (Union home minister) ಅಮಿತ್‌ ಶಾ (Amit Shah) ಕಿಡಿ ಕಾರಿದ್ದಾರೆ.

ಸಿಎಎ ಕಾಯ್ದೆ ವಿರುದ್ಧದ ಕಾಂಗ್ರೆಸ್‌ನ ನಿಲುವು ʼತುಷ್ಟೀಕರಣ ಮತ್ತು ವೋಟ್ ಬ್ಯಾಂಕ್ ರಾಜಕೀಯʼದಿಂದ ಹುಟ್ಟಿಕೊಂಡಿವೆ ಎಂದು ವಾಗ್ದಾಳಿ ನಡೆಸಿದರು.

ಹೈದರಾಬಾದ್‌ನ ಸಿಕಂದರಾಬಾದ್‌ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ನಾವು ಸಿಎಎ ಜಾರಿಗೆ ತರುತ್ತೇವೆ ಎಂದಾಗಲೇ ಕಾಂಗ್ರೆಸ್ ಇದನ್ನು ವಿರೋಧಿಸಿದೆ. ಸ್ವಾತಂತ್ರ್ಯದ ನಂತರ ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದಲ್ಲಿ ಧಾರ್ಮಿಕತೆಯ ಆಧಾರದ ಮೇಲೆ ಕಿರುಕುಳಕ್ಕೊಳಗಾದವರಿಗೆ ಭಾರತದ ಪೌರತ್ವ ನೀಡಲಾಗುವುದು ಎಂದು ಕಾಂಗ್ರೆಸ್ ಮತ್ತು ನಮ್ಮ ಸಂವಿಧಾನದ ನಿರ್ಮಾತೃಗಳು ಭರವಸೆ ನೀಡಿದ್ದರು. ಆದರೆ ತುಷ್ಟೀಕರಣ ಮತ್ತು ವೋಟ್ ಬ್ಯಾಂಕ್ ರಾಜಕೀಯದಿಂದಾಗಿ ಕಾಂಗ್ರೆಸ್ ಸಿಎಎಯನ್ನು ವಿರೋಧಿಸಿದೆ ಎಂದುವಾಗ್ದಾಳಿ ನಡೆಸಿದ್ದಾರೆ.

ಈ ವೇಳೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿ ಅವರು, ಸಿಎಎ ಮೂಲಕ ಪ್ರಧಾನಿ ಮೋದಿ ಅವರು ಹಿಂದೂ, ಸಿಖ್, ಬೌದ್ಧ ಮತ್ತು ಜೈನ ನಿರಾಶ್ರಿತರಿಗೆ ಆಶ್ರಯ ಒದಗಿಸುವ ಭರವಸೆ ನೀಡಿದ್ದಾರೆ. ತಮ್ಮ ನಂಬಿಕೆ ಮತ್ತು ಗೌರವವನ್ನು ಉಳಿಸಿಕೊಳ್ಳಲು ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಲಕ್ಷಾಂತರ ಮಂದಿ ಭಾರತಕ್ಕೆ ಬಂದಿದ್ದಾರೆ. ಆದರೆ ಕಾಂಗ್ರೆಸ್‌ ಅವರಿಗೆ ಪೌರತ್ವ ನೀಡಲಿಲ್ಲ ಎಂದು ಅವರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!