ಗಲಭೆಕೋರರ ನೆರವಿಗೆ ನಿಲ್ಲುವುದು ಕಾಂಗ್ರೆಸ್ ನಿಲುವು: ಸಿಎಂ ಬಸವರಾಜ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್

ಹೊಸದಿಲ್ಲಿ: ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಬಂಧಿತರ ನೆರವಿಗೆ ಧಾವಿಸಿರುವುದು ಶಾಸಕ ಜಮೀರ್ ಅಹಮದ್ ಹಾಗೂ ಅವರ ಪಕ್ಷದ ನಿಲುವು. ಗಲಭೆ ಮಾಡಿದವರ ಜೊತೆ ನಿಲ್ಲುವ ಕೆಲಸವನ್ನು ಮೊದಲಿನಿಂದಲೂ ಮಾಡಿಕೊಂಡೇ ಬಂದಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಹೊಸದಿಲ್ಲಿಗೆ ಆಗಮಿಸಿ ಕರ್ನಾಟಕ ಭವನದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಹುಬ್ಬಳ್ಳಿ ಪ್ರಕರಣದಲ್ಲಿ ಶಾಸಕ ಜಮೀರ್ ಅಹಮದ್ ಖಾನ್ ಅವರು ಬಂಧಿತರ ನೆರವಿಗೆ ಧಾವಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇದು ಮೊದಲ ಬಾರಿ ಏನಲ್ಲ. ಡಿಜೆ ಹಳ್ಳಿ ಕೆಜೆ ಹಳ್ಳಿ ಪ್ರಕರಣದಲ್ಲಿಯೂ ಅದನ್ನೇ ಮಾಡಿದ್ದರು. ಅದು ಅವರ ಮತ್ತು ಅವರ ಪಕ್ಷದ ನಿಲುವು. ಅವರು ಕಾಂಗ್ರೆಸ್ ಪಕ್ಷದ ಶಾಸಕರು ಹಾಗೂ ಅವರ ನಾಯಕರು ಅದರ ಬಗ್ಗೆ ಯಾವುದೇ ಸ್ಪಷ್ಟೀಕರಣ ಕೂಡ ನೀಡದೇ ಇರುವುದರಿಂದ ಅವರ ನಿಲುವು ತಿಳಿಯುತ್ತದೆ ಎಂದರು.

ಕೇಂದ್ರ ಗೃಹ ಸಚಿವರು ರಾಜ್ಯಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಪಿ.ಎಫ್.ಐ, ಎಸ್.ಡಿ.ಪಿ.ಐ. ಸಂಘಟನೆಗಳನ್ನು ಬ್ಯಾನ್ ಮಾಡುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಅಲ್ಲಿ ಚರ್ಚೆಯಾಗುವುದಿಲ್ಲ. ಪಿ.ಎಫ್.ಐ. ಕರ್ನಾಟಕದಲ್ಲಿ ಮಾತ್ರ ಅವರ ಚಟುವಟಿಕೆಗಳು ಸೀಮಿತವಾಗಿಲ್ಲ. ಉತ್ತರಪ್ರದೇಶ, ಕೇರಳ ಮಹಾರಾಷ್ಟ್ರದಲ್ಲಿಯೂ ಇದೆ. ಅದರ ಸಮಗ್ರ ಚಟುವಟಿಕೆಗಳ ಗೃಹ ಇಲಾಖೆ ಕ್ರಮ ಕೈಗೊಳ್ಳುತ್ತದೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!