ಭ್ರಷ್ಟಾಚಾರದ ಬೆಂಬಲಕ್ಕೆ ನಿಂತಿದೆ ಕಾಂಗ್ರೆಸ್: ಕೈ ನಾಯಕರ ಪ್ರತಿಭಟನೆಗೆ ಸ್ಮೃತಿ ಇರಾನಿ ತಿರುಗೇಟು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೆಹಲಿ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಿದ್ದು, ಇತ್ತ ವಿಚಾರಣೆ ಖಂಡಿಸಿ ದೇಶಾದ್ಯಂತ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದು, ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ.
ಈ ಕುರಿತು ಮಾತನಾಡಿದ ಬಿಜೆಪಿ ನಾಯಕಿ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು,ಯಾರೂ ಸಹ ಕಾನೂನಿಗಿಂತ ದೊಡ್ಡವರಲ್ಲ, ರಾಹುಲ್ ಗಾಂಧಿ ಕೂಡ . ಕಾಂಗ್ರೆಸ್ ಇಂದು ಪ್ರತಿಭಟನೆ ನಡೆಸುವ ಮೂಲಕ ಭ್ರಷ್ಟಾಚಾರದ ಬೆಂಬಲಕ್ಕೆ ನಿಂತಿದೆ. ಜೈಲಿನಿಂದ ಜಾಮೀನಿನ ಮೇಲೆ ಬಂದವರು ದೆಹಲಿ ಸುತ್ತುವರೆಯಲು ಬನ್ನಿ ಎಂದು ಘೋಷಿಸಿದ್ದಾರೆ. ತನಿಖಾ ಸಂಸ್ಥೆಯ ಮೇಲೆ ಒತ್ತಡ ಹೇರಲು ಕಾಂಗ್ರೆಸ್ ಆಡಳಿತದ ಸಚಿವರನ್ನು ಆಹ್ವಾನಿಸಲಾಗಿದೆ. ಏಜೆನ್ಸಿಯ ಮೇಲೆ ಈ ರೀತಿ ಒತ್ತಡಕ್ಕೆ ನೀವು ಯಾವ ಹೆಸರನ್ನು ನೀಡುತ್ತೀರಿ ಎಂದು ಪ್ರಶ್ನಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!