ಮೈಸೂರಿನಲ್ಲಿ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಬೆಂಬಲಿಗರ ಪ್ರತಿಭಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮುಡಾ ಹಗರಣ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರಾದ ಥಾವರ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಕೃಷ್ಣರಾಜ ಬುಲೆವಾರ್ಡ್ ರಸ್ತೆಯಲ್ಲಿರುವ ನ್ಯಾಯಾಲಯದ ಮುಂಭಾಗ ಜಮಾಯಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರುಗಳು ರಾಜ್ಯಪಾಲರ ವಿರುದ್ಧ ಘೋಷಣೆಗಳ ಕೂಗಿ ಪ್ರತಿಭಟಿಸಿದರು. ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ, ಕಾನೂನು ಗಾಳಿಗೆ ತೂರಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇದು ಕಾನೂನು ಬಾಹಿರ ನಡೆಯಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!