ಸಿದ್ದುಗೆ ಸೋಲಿನ ಗುದ್ದು ನೀಡಲು ಕಾಂಗ್ರೆಸ್‌ನಲ್ಲೇ ತಂಡ ಸಿದ್ಧವಾಗಿದೆ: ಎಚ್‌ಡಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಕಾಂಗ್ರೆಸ್‌ನಲ್ಲಿಯೇ ತಂಡವೊಂದು ಸಿದ್ಧವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಬುಧವಾರ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಕಾಂಗ್ರೆಸ್‌ನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಿಕೊಂಡಿದ್ದಾರೆ. ಇಂತಹಾ ಅಭ್ಯರ್ಥಿಗೆ ಇಂದು ಸ್ಪರ್ಧಿಸಲು ಕ್ಷೇತ್ರವೇ ಸಿಗುತ್ತಿಲ್ಲ. ಯಾವುದೇ ಕ್ಷೇತ್ರದಲ್ಲಿ ಅವರು ಸ್ಪರ್ಧಿಸಿದರೂ ಅವರನ್ನು ಸೋಲಿಸಲು ಕಾಂಗ್ರೆಸ್ ಒಳಗೆಯೇ ತಂಡ ಸಿದ್ಧವಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!