ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಟೆನ್ಶನ್ ಫ್ರೀ: ಬಂಡಾಯವೆದ್ದಿದ್ದ ಖಾದ್ರಿ ಮನವೊಲಿಸಿದ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಾವೇರಿಯ ಶಿಗ್ಗಾಂವಿ ಉಪಚುನಾವಣೆಗೆ ಕಾಂಗ್ರೆಸ್‌ನಿಂದ ಟಿಕೆಟ್‌ ಸಿಗದಿದ್ದಕ್ಕೆ ಬಂಡಾಯವೆದ್ದಿದ್ದ ಅಜ್ಜಂಪೀರ್‌ ಖಾದ್ರಿ ಮನವೊಲಿಸುವಲ್ಲಿ ಸಿಎಂ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ.

ಶಿಗ್ಗಾಂವಿಯಲ್ಲಿ ಕಾಂಗ್ರೆಸ್‌ ಟಿಕೆಟ್‌ ಯಾಸಿರ್‌ ಅಹ್ಮದ್‌ ಖಾನ್‌ ಪಠಾಣ್‌ ಪಾಲಾಗಿತ್ತು. ಪಠಾಣ್‌ ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದರು. ಈ ವೇಳೆ ತನಗೆ ಟಿಕೆಟ್‌ ಸಿಗಲಿಲ್ಲ ಎಂದು ಮುನಿಸಿಕೊಂಡ ಅಜ್ಜಂಪೀರ್‌ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು.

ಇದಾದ ಬಳಿಕ ಅಜ್ಜಂಪೀರ್‌ ಮನವೊಲಿಸುವ ಸಚಿವ ಜಮೀರ್‌ ಅವರ ಪ್ರಯತ್ನ ವಿಫಲವಾಗಿತ್ತು. ಈ ಹಿನ್ನೆಲೆಯಲ್ಲಿ ಶನಿವಾರ ಸಿಎಂ ನಿವಾಸಕ್ಕೆ ರೆಬೆಲ್‌ ನಾಯಕನನ್ನು ಕರೆತಂದಿದ್ದರು.

ಸಿಎಂ ಸಿದ್ದರಾಮಯ್ಯ ಅವರು ಮಾತುಕತೆ ನಡೆಸಿ ಅಜ್ಜಂಪೀರ್‌ ಬಂಡಾಯ ಶಮನಗೊಳಿಸಿದ್ದಾರೆ. ಇದರಿಂದ ಶಿಗ್ಗಾಂವಿಯಲ್ಲಿ ಕಾಂಗ್ರೆಸ್‌ ಮತ ವಿಭಜನೆಯ ಆತಂಕ ದೂರವಾಗಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಸಿಎಂ, ಶಿಗ್ಗಾಂವ್ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಅಜ್ಜಂಪೀರ್ ಖಾದ್ರಿ ಅವರ ಜೊತೆ ಮಾತುಕತೆ ನಡೆಸಿ, ಪಕ್ಷದ ಹಿತದೃಷ್ಟಿಯಿಂದ ನಾಮಪತ್ರ ಹಿಂಪಡೆಯುವಂತೆ ತಿಳಿಸಿದೆ. ಈ ವೇಳೆ ಅವರು ತಮ್ಮ ನಾಮಪತ್ರ ಹಿಂಪಡೆಯುವ ಜೊತೆಗೆ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಸಕ್ರಿಯವಾಗಿ ಕೆಲಸ ಮಾಡುವುದಾಗಿ ವಾಗ್ದಾನ ನೀಡಿದ್ದಾರೆ ಎಂದಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!