ಪಕ್ಷದ ಉಳಿವಿಗೆ ರಾಹುಲ್- ಪ್ರಿಯಾಂಕಾ ಹುದ್ದೆ ತೊರೆಯಲಿ ಎಂದ ತಮಿಳುನಾಡು ವಕ್ತಾರನಿಗೆ ಗೇಟ್ ಪಾಸ್ ಕೊಟ್ಟ ಕಾಂಗ್ರೆಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್

ಕಾಂಗ್ರೆಸ್ ಪಕ್ಷದ ಉಳಿವಿಗೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಪಕ್ಷದ ಹುದ್ದೆಯಿಂದ ಕೆಳಗಿಳಿಯಬೇಕು ಎಂದು ಹೇಳಿದ್ದ ತಮಿಳುನಾಡು ಕಾಂಗ್ರೆಸ್ ಪಕ್ಷದ ವಕ್ತಾರರ ಅಮೆರಿಕಾಯ್ ವಿ. ನಾರಾಯಣನ್ ಅವರನ್ನು ಪಕ್ಷದಿಂದ ವಜಾಗೊಳಿಸಲಾಗಿದೆ.
ತಮಿಳುನಾಡು ಕಾಂಗ್ರೆಸ್ ವಕ್ತಾರ ಅಮೆರಿಕಾಯ್ ವಿ. ನಾರಾಯಣನ್, ಮಮತಾ ಬ್ಯಾನರ್ಜಿ, ಜಗನ್ ಮೋಹನ್ ರೆಡ್ಡಿ ಮತ್ತು ಕೆ.ಚಂದ್ರಶೇಖರ್ ರಾವ್ ಅವರಂತಹ ನಾಯಕರು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳುವ ಮೂಲಕ ಜನರಲ್ಲಿ ವಿಶ್ವಾಸವನ್ನು ಪುನರ್ ಸ್ಥಾಪಿಸಬೇಕಾಗಿದೆಎಂದು ಅಭಿಪ್ರಾಯಪಟ್ಟಿದ್ದರು.
ಕಾಂಗ್ರೆಸ್ ಪಕ್ಷದ ಮುಂಚೂಣಿಯಲ್ಲಿ ಸೋನಿಯಾ ಗಾಂಧಿ ಅವರು ಇರಬೇಕು. ಆದರೆ ಮಕ್ಕಳಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಕಾಂಗ್ರೆಸ್ ಪಕ್ಷದ ಹುದ್ದೆಯಿಂದ ದೂರ ಇರಬೇಕು ಎಂದು ಹೇಳಿದರು.
ರಾಹುಲ್ ಗಾಂಧಿಯನ್ನು ನಾನು ಇಷ್ಟಪಡುತ್ತೇನೆ. ಆದರೆ ದುರಾದೃಷ್ಟವಶಾತ್ ಅವರಲ್ಲಿ ಇಚ್ಛಾಶಕ್ತಿಯ ಕೊರತೆ ಇದೆ . ರಾಹುಲ್, ಪ್ರಿಯಾಂಕಾ ಗಾಂಧಿಯ ಐಡಿಯಾಗಳನ್ನು ಜನರು ಈಗಾಗಲೇ ತಿರಸ್ಕರಿಸಿದ್ದಾರೆ. ಪಂಚ ರಾಜ್ಯ ಚುನಾವಣೆಯಲ್ಲಿಯೂ ಕಾಂಗ್ರೆಸ್ ಪಕ್ಷ ತೀವ್ರ ಮುಖಭಂಗ ಅನುಭವಿಸಿದೆ. ಹೀಗಾಗಿ ರಾಹುಲ್, ಪ್ರಿಯಾಂಕಾ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!