ಇಂದು ಕೂಡ ಮುಂದುವರಿಯಲಿದೆ ಕಾಂಗ್ರೆಸ್‌ ನ ಅಹೋರಾತ್ರಿ ಧರಣಿ: ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸಚಿವ ಕೆ.ಎಸ್.‌ ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧದಲ್ಲಿ ಕಾಂಗ್ರೆಸ್‌ ನಾಯಕರ ಅಹೋರಾತ್ರಿ ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದೆ.
ಗುರುವಾರದಿಂದ ಪ್ರಾರಂಭವಾದ ಈ ಧರಣಿ ಇಂದು ಕೂಡ ಮುಂದುವರಿಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಸೋಮವಾರ ರಾಜ್ಯಾದ್ಯಂತ ಎಲ್ಲಾ ತಾಲೂಕುಗಳಲ್ಲಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ ಎಂದರು.
ಕಾಂಗ್ರೆಸ್‌ ನ ಧರಣಿ ನಿರತರಿಗೆ ಊಟದ ವ್ಯವಸ್ಥೆ ಮಾಡಲಾಗಿದ್ದು, ಇಂದು ಬೆಳಗ್ಗೆಯೂ ಅಲ್ಲೇ ಉಪಹಾರ ನೀಡಲಾಗಿದೆ. ಹಲವರು ಮನೆಗೆ ತೆರಳಿ ಮತ್ತೆ ವಾಪಾಸ್‌ ಆಗಲು ತೀರ್ಮಾನಿಸಿದ್ದಾರೆ.
ಈ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಅಜಯ್‌ ಸಿಂಗ್‌, ಪ್ರಿಯಾಂಕ್‌ ಖರ್ಗೆ ಸೇರಿ ಹಲವು ನಾಯಕರು ವಿಧಾನಸೌಧದಲ್ಲಿ ನೆಲೆಯೂರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!