ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನ: ಅಮಿತ್ ಶಾ ಆರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370 ನೇ ವಿಧಿಯನ್ನು ಪುನಃಸ್ಥಾಪಿಸಲು ಕಾಂಗ್ರೆಸ್ ಮತ್ತು ರಾಷ್ಟ್ರೀಯ ಕಾಂಗ್ರೆಸ್ (ಎನ್‌ಸಿ) ಪಕ್ಷಗಳು ಪ್ರಯತ್ನಿಸುತ್ತಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿರುವ ‘ವಿಜಯ ಸಂಕಲ್ಪ’ ಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಕಣಿವೆ ರಾಜ್ಯ ಐತಿಹಾಸಿಕ ಚುನಾವಣೆಗೆ ಸಾಕ್ಷಿಯಾಗಲಿದೆ ಎಂದರು.

ಮುಂಬರುವ ಚುನಾವಣೆ ಐತಿಹಾಸಿಕವಾಗಲಿದೆ. ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದ ಜನರು ಒಂದೇ ತ್ರಿವರ್ಣ ಧ್ವಜದ ಅಡಿಯಲ್ಲಿ ಮತ ಚಲಾಯಿಸಲಿದ್ದಾರೆ. ಸಂವಿಧಾನದ ಅನುಸಾರವಾಗಿ ಚುನಾವಣೆ ನಡೆಯಲಿದೆ.

ಡಾ.ಅಂಬೇಡ್ಕರ್ ಅವರ ಸಂವಿಧಾನದ ಅಡಿಯಲ್ಲಿ ಚುನಾವಣೆ ನಡೆಯಲಿದೆ. ದೇಶದಲ್ಲಿ ಇಬ್ಬರು ಪ್ರಧಾನಿಗಳು ಇರಲು ಸಾಧ್ಯವಿಲ್ಲ. ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ಜನರು ಪ್ರಧಾನಿ ಮೋದಿ ಅವರನ್ನು ಆಯ್ಕೆ ಮಾಡಿದ್ದಾರೆ. ಹಾಗೆಯೇ ಜಮ್ಮುವಿನಲ್ಲಿ ಎರಡು ಧ್ವಜಗಳು ಇರಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!