Tuesday, May 30, 2023

Latest Posts

ಚುನಾವಣೆಯನ್ನು ಉತ್ಸಾಹದಿಂದ ಸ್ವಾಗತಿಸುವುದಾಗಿ ಕಾಂಗ್ರೆಸ್‌ ಟ್ವೀಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಮೇ 10ರಂದು ಚುನಾವಣೆ, 13ಕ್ಕೆ ಫಲಿತಾಂಶ ಹೊರಬೀಳಲಿದೆ. ಈ ಕುರಿತು ಈಗಾಗಲೇ ಜಿದ್ದಾಜಿದ್ದಿನ ಕಣಕ್ಕೆ ಬಿದ್ದಿರುವ ರಾಜಕೀಯ ಪಕ್ಷಗಳು ತಮ್ಮದೇ ದಾಟಿಯ ಪ್ರತಿಕ್ರಿಯೆ ನೀಡುತ್ತಿವೆ.

ಈ ಕುರಿತು ಟ್ವೀಟವ ಮಾಡಿರುವ ರಾಜ್ಯ ಕಾಂಗ್ರೆಸ್‌, ಈಗ ಕರ್ನಾಟಕದಲ್ಲಿ ಹೊಸ ಪ್ರಗತಿಪರ ಭವಿಷ್ಯದ ಅಲೆ ಶುರುವಾಗಿದೆ. ರಾಜ್ಯದಲ್ಲಿ ಮೇ 10 ರಂದು ನಡೆಯಲಿರುವ ಚುನಾವಣೆಯನ್ನು ಉತ್ಸಾಹದಿಂದ ಸ್ವಾಗತಿಸುತ್ತೇವೆ ಎಂದಿದೆ. ಈ ಮೂಲಕ ಕಾಂಗ್ರೆಸ್ ಪಕ್ಷ ಜನರಿಗೆ ಅಭಿವೃದ್ಧಿ ಮತ್ತು ಪಾರದರ್ಶಕತೆಯನ್ನು ಮರಳಿ ನೀಡಲು ಸಜ್ಜಾಗಿದೆ. ಎಂದು ತಮ್ಮ ಅಧಿಕೃತ ಟ್ವಿಟ್ಟರ್‌ ಹ್ಯಾಂಡಲ್‌ನಲ್ಲಿ ಪೋಸ್ಟ್‌ ಮಾಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!