ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆ ಸಂಬಂಧಿಸಿದ ಚುನಾವಣೋತ್ತರ ಸಮೀಕ್ಷೆಯಲ್ಲಿ (Exit Polls) ಭಾಗವಹಿಸಲು I.N.D.I.A. ಒಕ್ಕೂಟ ನಿರ್ಧರಿಸಿದೆ.
ಟಿವಿಗಳಲ್ಲಿ ನಡೆಯುವ ಎಕ್ಸಿಟ್ ಪೋಲ್ ಚರ್ಚೆಗಳಲ್ಲಿ (Exit Polls Debate) ಭಾಗವಹಿಸುವುದಿಲ್ಲ ಎಂದಿದ್ದ ಕಾಂಗ್ರೆಸ್ ಇದೀಗ ಯು-ಟರ್ನ್ ಹೊಡೆದಿದೆ. ಇಂದು ಮಧ್ಯಾಹ್ನ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರ ಮನೆಯಲ್ಲಿ ನಡೆದ ಇಂಡಿಯ ಒಕ್ಕೂಟದ ಸಭೆಯಲ್ಲಿ ಎಲ್ಲ ಪಕ್ಷಗಳ ನಾಯಕರೂ ವಾಹಿನಿಗಳ ಲೋಕಸಭೆ ಚುನಾವಣೆಯ (Lok Sabha Elections) ಎಕ್ಸಿಟ್ ಪೋಲ್ ಚರ್ಚೆಗಳಲ್ಲಿ ಭಾಗವಹಿಸಲು ನಿರ್ಧರಿಸಿರುವುದಾಗಿ ಕಾಂಗ್ರೆಸ್ ಮಾಹಿತಿ ನೀಡಿದೆ.
ಇಂಡಿಯ ಬಣದ ಪಕ್ಷಗಳು ಸಭೆ ಸೇರಿ ಬಿಜೆಪಿ ಮತ್ತು ಅದರ ಪರಿಸರ ವ್ಯವಸ್ಥೆಯನ್ನು ಎಕ್ಸಿಟ್ ಪೋಲ್ ಸಮೀಕ್ಷೆಗಳಲ್ಲಿ ಬಹಿರಂಗಪಡಿಸಲು ನಿರ್ಧರಿಸಿವೆ. ಎಕ್ಸಿಟ್ ಪೋಲ್‌ನಲ್ಲಿ ಭಾಗವಹಿಸುವ ಪರ ಮತ್ತು ವಿರುದ್ಧ ಅಂಶಗಳನ್ನು ಪರಿಗಣಿಸಿದ ನಂತರ, ಇಂದು ಸಂಜೆ ವಾಹಿನಿಗಳಲ್ಲಿ ನಡೆಯುವ ಎಕ್ಸಿಟ್ ಪೋಲ್ ಚರ್ಚೆಯಲ್ಲಿ ಇಂಡಿಯ ಬಣದ ಎಲ್ಲಾ ಪಕ್ಷಗಳು ಭಾಗವಹಿಸಲು ಒಮ್ಮತದಿಂದ ನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್ ನಾಯಕ ಪವನ್ ಖೇರಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಮೈತ್ರಿಕೂಟದ ಪಾಲುದಾರರಾದ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷವು ಎಕ್ಸಿಟ್ ಪೋಲ್‌ಗಳಲ್ಲಿ ಭಾಗವಹಿಸುವುದಿಲ್ಲ ಎಂದು ಶುಕ್ರವಾರ ಘೋಷಿಸಿತ್ತು.