ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ಮೋದಿ ನಾಡು ಗುಜರಾತ್‌ನಲ್ಲಿ ಬಿಜೆಪಿ ವಿರುದ್ಧ ಲೋಕಸಭೆಯಲ್ಲಿ ಗೆಲುವು ಸಾದಿಸಲು ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಾರ್ಟಿ ಒಗ್ಗಟ್ಟಾಗಿದೆ .
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು I-N-D-I-A ಮೈತ್ರಿ ಮೂಲಕ ಈಗಾಗಲೇ ಒಗ್ಗಟ್ಟಾಗಿರುವ ಕಾಂಗ್ರೆಸ್, ಆಪ್ ಸೇರಿದಂತೆ 26ಕ್ಕೂ ಹೆಚ್ಚು ಪಾರ್ಟಿಗಳು ಮೈತ್ರಿ ಮಾಡಿಕೊಂಡಿದೆ.
ಗುಜರಾತ್‌ನಲ್ಲಿ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಾರ್ಟಿ ಮೈತ್ರಿ ಮೂಲಕ ಚುನಾವಣೆ ಎದುರಿಸಲಿದೆ. ಸೀಟುಗಳ ಹಂಚಿಕೆ ಮಾಡಿಕೊಂಡು ಬಿಜೆಪಿಯನ್ನು ಮಣಿಸುತ್ತೇವೆ ಎಂದು ಗುಜರಾತ್ ಆಮ್ ಆದ್ಮಿ ಪಾರ್ಟಿ ಅಧ್ಯಕ್ಷ ಇಸುದಾನ್ ಗಧ್ವಿ ಘೋಷಿಸಿದ್ದಾರೆ.
ಕೇಂದ್ರ ಸರ್ಕಾರದ ಬಿಲ್ ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಹೋರಾಟ ನಡೆಸುತ್ತಿದೆ. ಇದಕ್ಕೆ ಕಾಂಗ್ರೆಸ್ ಕೂಡ ಬೆಂಬಲ ಸೂಚಿಸಿದೆ. ಕಾಂಗ್ರೆಸ್ ಬೆಂಬಲ ಸಿಕ್ಕ ಖುಷಿಯಲ್ಲಿ ಆಮ್ ಆದ್ಮಿ ಪಾರ್ಟಿ, ಮೈತ್ರಿ ಘೋಷಣೆ ಮಾಡಿದೆ. ಗುಜರಾತ್‌ನಲ್ಲಿ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಾರ್ಟಿ ಮೈತ್ರಿ ಮೂಲಕ ಸಾಗಲಿದೆ ಎಂದು ಇಸುಧಾನ್ ಹೇಳಿದ್ದಾರೆ.
ಕಾಂಗ್ರೆಸ್ ಹಾಗೂ ಆಪ್ ಮೈತ್ರಿ ಕುರಿತು ಗುಜರಾತ್ ಕಾಂಗ್ರೆಸ್ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಮೈತ್ರಿ ಕುರಿತು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಲಿದೆ ಎಂದು ಗುಜರಾತ್ ಕಾಂಗ್ರೆಸ್ ನಾಯಕ ಹೇಳಿದ್ದಾರೆ.