ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಉಪಚುನಾವಣೆ ಪ್ರಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ನ.4ರಿಂದ 11ರವರೆಗೆ ಮೂರು ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದು, ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದರು.
ಶಿಗ್ಗಾಂವಿಯಲ್ಲಿ ನಾಮಪತ್ರ ಹಿಂಪಡೆಯುವಂತೆ ನಾವೇ ಅಜ್ಜಂಪೀರ್ ಖಾದ್ರಿಗೆ ಹೇಳಿದ್ದೇವು. ನೀವು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷದ ವಿರುದ್ಧ ಹೋಗಬೇಡಿ ಎಂದು ಹೇಳಿದ್ದೇವೆ. ಇದರಿಂದಾಗಿ ನಾಮಪತ್ರ ಹಿಂಪಡೆಯಲಾಗಿದೆ ಎಂದರು.