ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲುವು ಖಚಿತ, ನಮಗೆ ಯಾವ ಭಯವೂ ಇಲ್ಲ: ಡಿಕೆಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ನಿಮ್ಮ ಎಕ್ಸಿಟ್ ಪೋಲ್ ಫಲಿತಾಂಶಗಳೆಲ್ಲಾ ತಲೆಕೆಳಗಾಗುತ್ತವೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಉಪಚುನಾವಣೆ ಫಲಿತಾಂಶ ನಾಳೆ ಪ್ರಕಟವಾಗುತ್ತಿದೆ, ಮಹಾರಾಷ್ಟ್ರದಲ್ಲಿಯೂ ಗೆದ್ದೇ ಗೆಲ್ಲುತ್ತೇವೆ ಎನ್ನುವ ಆತ್ಮವಿಶ್ವಾಸವಿದೆ. ನನಗೆ ಆ ರಾಜ್ಯದ ಬಗ್ಗೆ ಹೆಚ್ಚು ಚಿತ್ರಣವಿಲ್ಲ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರು ಸರಳ ಬಹುಮತ ಪಡೆದು ಸರ್ಕಾರ ರಚನೆ ಮಾಡುತ್ತೇವೆ ಎಂದು ಹೇಳಿದ್ದಾರೆ. ನಾನು ಕೂಡ ಪ್ರಚಾರಕ್ಕೆ ಹೋಗಿದ್ದೆ, ಆಗ ಕಾಂಗ್ರೆಸ್ ಪರ ಅಲೆ ಕಂಡಿತು. ಆದರೆ ಮತ ಪೆಟ್ಟಿಗೆಯಲ್ಲಿ ಏನಿದೆ ಎಂಬುದು ಯಾರಿಗೂ ತಿಳಿಯುವುದಿಲ್ಲ. ಜಾರ್ಖಂಡ್ ಬಗ್ಗೆ ಗೊತ್ತಿಲ್ಲ ಎಂದು ಹೇಳಿದರು.

ಎಲ್ಲಾ ಎಕ್ಸಿಟ್ ಪೋಲ್ ಗಳು ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆ ಸೋಲು ಹಾಗೂ ಜಮೀರ್ ಅವರ ಮೈ ಬಣ್ಣ ಹೇಳಿಕೆ ಪರಿಣಾಮ ಬೀರಿದೆ ಎನ್ನುವ ಬಗ್ಗೆ ಕೇಳಿದಾಗ, “ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕೇವಲ 16 ಸಾವಿರ ಮತಗಳು ಮಾತ್ರ ದೊರೆತಿದ್ದವು. ಆದರೆ ಈ ಬಾರಿ ಗೆದ್ದೇ ಗೆಲ್ಲುತ್ತೇವೆ ಎನ್ನುವ ಆತ್ಮವಿಶ್ವಾಸ ನನಗಿದೆ. ರಾಮನಗರದಲ್ಲಿ ಇಕ್ಬಾಲ್ ಹುಸೇನ್, ಮಾಗಡಿಯಲ್ಲಿ ಬಾಲಕೃಷ್ಣ, ಕನಕಪುರದಲ್ಲಿ ನಾನು ಗೆದ್ದಿದ್ದೆವು. ಚನ್ನಪಟ್ಟಣದಲ್ಲಿ ಮಾತ್ರ ಗೆದ್ದಿರಲಿಲ್ಲ. ಈ ಬಾರಿ ಗೆಲುವು ಖಂಡಿತ” ಎಂದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!