ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ರದ್ದು ಮಾಡಲಿದೆ, ಬಿಜೆಪಿಗೇ ಮತ ನೀಡಿ ಗೆಲ್ಲಿಸಿ: ಜೆಪಿ ನಡ್ಡಾ ಕರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ನಮ್ಮ ಸರ್ಕಾರ ಒಕ್ಕಲಿಗ ಹಾಗೂ ಲಿಂಗಾಯತರಿಗೆ ಮೀಸಲಾತಿ ಹೆಚ್ಚಳ ಮಾಡಿದೆ. ಎಸ್ಸಿ ಎಸ್ಟಿ ಸಮುದಾಯಗಳಿಗೂ ಮೀಸಲಾತಿ ಹೆಚ್ಚಳ ಮಾಡಲಾಗಿದೆ. ಆದರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಿಜೆಪಿ (BJP) ಸರ್ಕಾರ ನೀಡಿರುವ ಮೀಸಲಾತಿಯನ್ನು ರದ್ದು ಮಾಡುವುದಾಗಿ ಹೇಳಿದೆ. ಹೀಗಾಗಿ ಈ ಬಾರಿ ಬಿಜೆಪಿಗೇ ಮತ ನೀಡಿ ಗೆಲ್ಲಿಸಿ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಕರೆ ನೀಡಿದರು.

ಚಿಕ್ಕಬಳ್ಲಾಫುರ ಜಿಲ್ಲೆಯ ಶಿಡ್ಲಘಟ್ಟ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಸಿಕಲ್ ರಾಮಚಂದ್ರ ಗೌಡ ಪರ ರೋಡ್ ಶೋ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ವಿರುದ್ದ ವಾಗ್ದಾಳಿ ನಡೆಸಿದರು.

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆ. ರಾಜ್ಯದಲ್ಲಯೂ ಬಿಜೆಪಿ ಸರ್ಕಾರ ಮುಂದುವರೆಯಬೇಕು. ಈ ಮೂಲಕ ಡಬಲ್ ಇಂಜಿನ್ ಸರ್ಕಾರಗಳಿಂದ ರಾಜ್ಯಕ್ಕೆ ಒಳಿತು ಆಗಲಿದೆ. ಸಮಾನತೆ ಹಾಗೂ ಅಭಿವೃದ್ದಿಯಲ್ಲಿ ಬಿಜೆಪಿ ಭರವಸೆ ಇಟ್ಟಿದೆ. ಬಿಎಸ್ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯ ಸರ್ಕಾರ ಒಳ್ಳೆ ಕೆಲಸ ಮಾಡಿದೆ ಎಂದು ಅವರು ಹೇಳಿದ್ದಾರೆ.

ಕೇಂದ್ರದಲ್ಲಿ ಮೋದಿ, ರಾಜ್ಯದಲ್ಲಿ ಬೊಮ್ಮಾಯಿ ಅಭಿವೃದ್ಧಿ ಮಾಡ್ತಿದ್ದಾರೆ. 2018ರಲ್ಲಿ ಕೊಟ್ಟಿದ್ದ ಎಲ್ಲಾ ಭರವಸೆಗಳನ್ನು ಬಿಜೆಪಿ ಈಡೇರಿಸಿದೆ. ಪಿಎಫ್​ಐ ದೇಶವನ್ನು ಸಂಕಷ್ಟಕ್ಕೆ ಸಿಲುಕಿಸುವ ಪ್ರಯತ್ನ ಮಾಡುತ್ತಿತ್ತು. ಸಿದ್ದರಾಮಯ್ಯ ಸರ್ಕಾರ ಪಿಎಫ್​ಐ ಸಂಘಟನೆಗೆ ಬೆಂಬಲ ನೀಡುತ್ತಿತ್ತು. ಆದರೆ ಪಿಎಫ್​​ಐ ಸಂಘಟನೆಯನ್ನು ಬಿಜೆಪಿ ಸರ್ಕಾರ ನಿಷೇಧಿಸಿದೆ ಎಂದು ಅವರು ಹೇಳಿದರು.

ಹಳ್ಳಿ ಹಳ್ಳಿ, ಗಲ್ಲಿ ಗಲ್ಲಿಯೂ ಈ ಸಲ ಬಿಜೆಪಿ ಜಯಭೇರಿ ಬಾರಿಸಬೇಕು. ಪ್ರತಿಯೊಬ್ಬರೂ ಚುನಾವಣೆಯಲ್ಲಿ ಬಿಜೆಪಿ ಬಟನ್ ಒತ್ತಬೇಕು ಎಂದು ಕರೆ ನೀಡಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!