ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಈ ವಿಚಾರ ರಾಜಕೀಯ ವಲಯದಲ್ಲಿ ಭಾರೀ ಪರ-ವಿರೋಧ ಚರ್ಚೆಗೆ ಗ್ರಾಸವಾಗಿದೆ. ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ನಾಮಕರಣ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಎಚ್‌ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಅವರು ಸ್ವಲ್ಪ ಸಮಯದವರೆಗೆ ಸಂತೋಷವಾಗಿರಲಿ ಮತ್ತು 2028 ರಲ್ಲಿ ಹೆಸರನ್ನು ಮರುನಾಮಕರಣ ಮಾಡಲಾಗುವುದು ಎಂದು ಕುಮಾರಸ್ವಾಮಿ ಹೇಳಿದ್ದರು.
ಇನ್ನು ಹೆಚ್ ಡಿಕೆ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಬರೆದಿಟ್ಟುಕೊಳ್ಳಲಿ 2028ರಲ್ಲಿ ಮತ್ತೆ ಇದೇ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಸವಾಲು ಹಾಕಿದ್ದಾರೆ.