spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, December 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಜೆಡಿಎಸ್ ಅಭ್ಯರ್ಥಿಗಳಿಂದ ಕಾಂಗ್ರೆಸ್‌ಗೆ ಹಿನ್ನಡೆ ಆಗುವುದಿಲ್ಲ: ಮಲ್ಲಿಕಾರ್ಜುನ ಖರ್ಗೆ

- Advertisement -Nitte

ದಿಗಂತ ವರದಿ ಕಲಬುರಗಿ: 

ಸಿಂದಗಿ-ಹಾನಗಲ್ ಉಪ ಚುನಾವಣೆಯಲ್ಲಿ ಜೆಡಿಎಸ್ ಮೊದಲ ಬಾರಿಗೆ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ. ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ ಆಗುವುದಿಲ್ಲ. ಮುಸ್ಲಿಂ ಸಮುದಾಯ ಐಡಾಲೋಜಿಕಲ್ ಬೆಸ್ ಮೇಲೆ ಮತಚಲಾವಣೆ ಮಾಡುತ್ತಾರೆ.ಹೀಗಾಗಿ ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಸಾಧಿಸಲಿದೆ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಪ ಸಂಖ್ಯಾತ ಅಭ್ಯರ್ಥಿ ಹಾಕಿದರೇ,ಕಾಂಗ್ರೆಸ್ ಗೆ ಹಿನ್ನಡೆ ಎಂದು ತಿಳುದುಕೊಂಡರೆ, ಅದು ತಪ್ಪು ಕಲ್ಪನೆ.ಮುಸ್ಲಿಂ ಜನಾಂಗ ಐಡಲಾಜಿಕಲ್ ಬೆಸಸ್ ಮೇಲೆ ಮತಾದಾನ ಮಾಡುತ್ತಾರೆ ಎಂದರು.

ಕಾಂಗ್ರೆಸ್ ಜಾತ್ಯಾತೀತ ತತ್ವದ ಮೇಲೆ ನಡೆಯುವ ಪಕ್ಷ ಹೀಗಾಗಿ ಈ ಎರಡು ಕ್ಷೇತ್ರದಲ್ಲಿ ಜನರು ಕಾಂಗ್ರೆಸ್, ಗೆ ಆಶೀರ್ವಾದ ಮಾಡಲಿದ್ದಾರೆ ಎಂದರು.

ದೇಶದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಗಣನೀಯವಾಗಿ ಹೆಚ್ಚಳವಾಗಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಬೆಲೆ ಏರಿಕೆ ಬಗ್ಗೆ ಮಾತನಾಡಿದರೆ, ಜನ ವಿರೋಧಿಗಳು, ದೇಶ ವಿರೋಧಿಗಳು ಎಂಬ ಪಟ್ಟ ಕಟ್ಟುತ್ತಾರೆ ಕೆಲವು ಜನರು ಎಂದ ಅವರು, ಇಂಥಹ ವಿಕೃತ ಮನಸ್ಸಿನವರಿದ್ದಾರೆ ಎಂದರು.
ಪೆಟ್ರೋಲ್ ಬೆಲೆ ನೂರು ರಾಪಾಯಿ ಪರವಾಗಿಲ್ಲ ಎನ್ನುತ್ತಾರೆ. ನಮ್ಮ ಕಾಲದಲ್ಲಿ 60 ರೂಪಾಯಿ ಪೆಟ್ರೋಲ್ ದೊರಕುತಿತ್ತು. ಇದೀಗ ನೂರರ ಗಡಿ ದಾಟಿದರು ಯಾರು ಕೇಳುತ್ತಿಲ್ಲ ಎಂದರು.

ಕಚ್ಚಾ ತೈಲ ಬೆಲೆ ಕಡಿಮೆ ಇದ್ದರು, ದೇಶದಲ್ಲಿ ಪೆಟ್ರೋಲ್, ಡೀಸೆಲ್ ನೂರರ ಗಡಿ ದಾಟುತ್ತಿದೆ. ಇದರಿಂದ ಸಾಮಾನ್ಯ ಜನರಿಗೆ ಹೊರೆ ಆಗುತ್ತಿದೆ ಎಂದು ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು.

ಮೊದಲಬಾರಿಗೆ ದಲಿತ ಸಿಎಂ:

ಛತ್ತೀಸಗಡ ದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಇಲ್ಲ, ಅವರೆ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ಸಿಎಂ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಪಂಜಾಬ್ ನಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವು ಸರಿಯಾಗಿದೆ. ದೇಶದಲ್ಲೆ ಮೊದಲ ಬಾರಿಗೆ ದಲಿತ ಮುಖ್ಯಮಂತ್ರಿ ಮಾಡಿದ್ದಾರೆ.
ಎಲ್ಲರು ಅವರಿಗೆ ಸನ್ಮಾನ ಸಹಕಾರ ನೀಡಬೇಕು ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss