ಕಾಂಗ್ರೆಸ್ ಮುಖ್ಯಮಂತ್ರಿಗಳ ಪರವಾಗಿ ನಿಲ್ಲಲಿದೆ, ರಾಜೀನಾಮೆ ನೀಡುವ ಅಗತ್ಯವಿಲ್ಲ: ಡಿ.ಕೆ. ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಳ್ಳಿಯಿಂದ ದಿಲ್ಲಿಯವರೆಗೂ ಕಾಂಗ್ರೆಸ್ ಪಕ್ಷ ನಮ್ಮ ಮುಖ್ಯಮಂತ್ರಿಗಳ ಪರವಾಗಿ ನಿಲ್ಲಲಿದೆ, ಸಿಎಂ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸ್ಪೀಕರ್ ಕೋಳಿವಾಡ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಕೆಪಿಸಿಸಿ ಅಧ್ಯಕ್ಷ ನಾನು, ಅವರ ರಾಜೀನಾಮೆ ಪ್ರಶ್ನೆಯೇ ಉದ್ಭವ ಆಗುವುದಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ದೊಡ್ಡ ರಾಜ್ಯ ಕರ್ನಾಟಕ. ಇಲ್ಲಿ ನಮ್ಮ ಸರ್ಕಾರ ಇರುವುದು ಅವರಿಂದ ಸಹಿಸಲು ಸಾಧ್ಯವಾಗುತ್ತಿಲ್ಲ. ಸಿಎಂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಸಿಎಂ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರ ಟೀಕೆ ಬಗ್ಗೆ ಕೇಳಿದಾಗ, ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರದ ವೇಳೆ ಸಿಎಂ ಸಿದ್ದರಾಮಯ್ಯ ಅವರ ವಿಚಾರ ಪ್ರಸ್ತಾಪ ಮಾಡುತ್ತಿದ್ದು, ಈ ವಿಚಾರದಲ್ಲಿ ಅವರು ರಾಜಕಾರಣ ಮಾಡುತ್ತಿದ್ದಾರೆ. ಅವರ ಸರ್ಕಾರದ ಸಚಿವರುಗಳು ಅನೇಕ ಪ್ರಕರಣಗಳ ತನಿಖೆ ಎದುರಿಸುತ್ತಿದ್ದು, ಮೊದಲು ಅವರನ್ನು ಸಚಿವ ಸಂಪುಟದಿಂದ ಕೈಬಿಡಲಿ. ನಂತರ ಈ ಬಗ್ಗೆ ಚರ್ಚೆ ಮಾಡಲಿ ಎಂದು ಕಿಡಿಕಾರಿದ್ದಾರೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!