ಕಾಂಗ್ರೆಸ್ ತಿಪ್ಪರಲಾಗ ಹಾಕಿದ್ರೂ ಅಧಿಕಾರಕ್ಕೆ ಬರಲ್ಲ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ

ಹೊಸದಿಗಂತ ವರದಿ, ಹುಬ್ಬಳ್ಳಿ:
ಕಾಂಗ್ರೆಸ್ ಭಾರತ ಜೋಡೋ ಮಾಡಲಿ, ರಥಯಾತ್ರೆ ನಡೆಸಲಿ ಏನೇ ತಿಪ್ಪರಲಾಗ ಮಾಡಿದರು ಮುಂಬರುವ ವಿಧಾನ‌ಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಮಾಜಿ‌ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡಿನ ಮತದಾರರು ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಪರ ಇದ್ದಾರೆ. ಕಾಂಗ್ರೆಸ್ ಎಷ್ಟೇ ಕಾರ್ಯತಂತ್ರ ರೂಪಿಸಿದರೂ ಅಧಿಕಾರಕ್ಕೆ ಬರಲು ಮಾತ್ರ ಸಾಧ್ಯವಿಲ್ಲ ಎಂದರು. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ನಡೆಸಲು ಸೆ. 22ರಂದು ನಾನು ರಾಜ್ಯದಾದ್ಯಂತ ಪ್ರವಾಸ ಮಾಡುತ್ತಿದ್ದೇನೆ’ ಎಂದು ತಿಳಿಸಿದರು.
ಬಳ್ಳಾರಿ ವಿಮ್ಸ್’ನಲ್ಲಿ ನಡೆದ ರೋಗಿಗಳ ಸಾವು ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ‘ತನಿಖೆ ನಡೆಯುತ್ತಿದೆ, ನೋಡೋಣ’ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!