ದೇಶದಲ್ಲಿ ಕಾಂಗ್ರೆಸ್ 40ರಿಂದ 45 ಸ್ಥಾನಗಳನ್ನೂ ಗೆಲ್ಲುವುದಿಲ್ಲ: ರಾಧಾ ಮೋಹನ್ ದಾಸ್ ಲೇವಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈಶ್ವರಪ್ಪ ಪಕ್ಷಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಪಕ್ಷಕ್ಕಾಗಿ ದುಡಿದಿದ್ದಾರೆ. ನಿಮ್ಮ ಹತಾಶೆ ಅರ್ಥವಾಗುವಂತಹದ್ದಾಗಿದೆ. ಈಶ್ವರಪ್ಪ ಅವರಿಗೆ ದೇವರು ಒಳ್ಳೆಯ ಬುದ್ದಿ ಕರುಣಿಸಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಚುನಾವಣಾ ಅಧ್ಯಕ್ಷ ರಾಧಾ ಮೋಹನ್ ದಾಸ್ ಅಗರವಾಲ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಹೆಚ್ಚು ಮಾತನಾಡಲು ಬಯಸುವುದಿಲ್ಲ. ಅವರ ಬಗ್ಗೆ ನನಗೆ ಬೇಸರವಾಗಿದೆ ಎಂದಷ್ಟೇ ಹೇಳಿದರು.

ಕರ್ನಾಟಕದ 28 ಸ್ಥಾನಗಳ ಪೈಕಿ 28 ಸ್ಥಾನಗಳನ್ನೂ ಗೆಲ್ಲಲಿದೆ. ಕಾಂಗ್ರೆಸ್ ಕೈಯಲ್ಲಿ ಸಾಕಷ್ಟು ಹಣವಿದೆ. ಈ ಬಾರಿ 500 ಕೋಟಿಗೂ ಹೆಚ್ಚು ವೆಚ್ಚವಾಗಲಿದೆ. ಆದಾಗ್ಯೂ, ಕಾಂಗ್ರೆಸ್ ಮೇಲೆ ಜನತೆಗೆ ಭರವಸೆಯೇ ಇಲ್ಲದ ಕಾರಣ ಇಡಿ ದೇಶದಲ್ಲಿ ಕಾಂಗ್ರೆಸ್ 40ರಿಂದ 45 ಸ್ಥಾನಗಳನ್ನೂ ಗೆಲ್ಲುವುದಿಲ್ಲ ಎಂದು ಲೇವಡಿ ಮಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!