ಕಾಂಗ್ರೆಸ್‌ ಕಾರ್ಯಕರ್ತೆ ಹಿಮಾನಿ ಶವ ಸೂಟ್‌ಕೇಸ್‌ನಲ್ಲಿ ಪತ್ತೆ: ಓರ್ವ ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತನನ್ನ ಬಂಧಿಸಲಾಗಿದೆ ಎಂದು ಹರಿಯಾಣ ಪೊಲೀಸ್‌ ಮೂಲಗಳು ತಿಳಿಸಿವೆ.

ಶಂಕಿತ ಆರೋಪಿಯಿಂದ ಹಿಮಾನಿ ನರ್ವಾಲ್‌ನ ಮೊಬೈಲ್‌ ಹಾಗೂ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತನನ್ನ ಬಹದ್ದೂರ್‌ಗಢ ನಿವಾಸಿಯಾಗಿದ್ದು, ಈತ ಹಿಮಾನಿಯೊಂದಿಗೆ ಸಂಪರ್ಕ ಹೊಂದಿದ್ದ ಎಂದು ವರದಿಗಳು ತಿಳಿಸಿವೆ.

ರೋಹ್ಟಕ್ ಜಿಲ್ಲೆಯ ಬಸ್ ನಿಲ್ದಾಣದ ಬಳಿಯಿದ್ದ ಸೂಟ್‌ಕೇಸ್‌ನಲ್ಲಿ ಹಿಮಾನಿ ಶವ ಪತ್ತೆಯಾದ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದ ಹರಿಯಾಣ ಪೊಲೀಸ್‌ ಇಲಾಖೆ ತನಿಖೆಗಾಗಿ ವಿಶೇಷ ತಂಡವನ್ನ ರಚನೆ ಮಾಡಿತ್ತು. ಪ್ರಕರಣ ಬೆಳಕಿಗೆ ಬಂದ ಒಂದು ದಿನದ ನಂತರ ಓರ್ವನನ್ನ ಬಂಧಿಸಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!