ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಪರಿಷತ್ ಸದಸ್ಯ ಶರಣಗೌಡ ಬಯ್ಯಾಪುರ ಮೇಲೆ ಕಾಂಗ್ರೆಸ್ ಕಾರ್ಯಕರ್ತರೇ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ.
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೊರೇಬಾಳ ಗ್ರಾಮದಲ್ಲಿ ಎಂಎಲ್ ಸಿ ಶರಣಗೌಡ ಬಯ್ಯಾಪುರ ಮೇಲೆ ಹಲ್ಲೆಗೆ ಯತ್ನ ನಡೆದಿದೆ.
ಕಾಂಗ್ರೆಸ್ ಕಾರ್ಯಕರ್ತರಿಂದಲೇ ಕಾಂಗ್ರೆಸ್ ಎಂಎಲ್ಸಿ ಶರಣಗೌಡ ಬಯ್ಯಾಪುರ ಅವರ ಮೇಲೆ ಹಲ್ಲೆಗೆ ಯತ್ನ ನಡೆಸಿರುವುದು ಅಚ್ಚರಿ ಉಂಟು ಮಾಡಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.