ಜೆಡಿಎಸ್‌ಗೆ ಮತಹಾಕಿದ್ದಕ್ಕೆ ಯುವಕನ ಬೆರಳು ಕತ್ತರಿಸಿದ ಕಾಂಗ್ರೆಸ್‌ ಕಾರ್ಯಕರ್ತರು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಜೆಡಿಎಸ್‌ಗೆ ವೋಟ್‌ ಮಾಡಿದ್ದಕ್ಕೆ ಕಾಂಗ್ರೆಸ್‌ ಕಾರ್ಯಕರ್ತರು ಕೈ ಬೆರಳನ್ನು ಕತ್ತರಿಸಿದ್ದಾರೆ ಎನ್ನುವ ಗಂಭೀರ ಆರೋಪ ಎದುರಾಗಿದೆ.

ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಕಾರ್ಯಕರ್ತರ ಮೇಲೆ ಕಾಂಗ್ರೆಸ್​​ನವರು ಮಚ್ಚಿನಿಂದ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಘಟನೆಯಲ್ಲಿ ಓರ್ವ ಜೆಡಿಎಸ್ ಕಾರ್ಯಕರ್ತನ ಬೆರಳು ಕಟ್ ಆಗಿದ್ದು, ತಲೆಗೆ ಗಂಭೀರವಾದ ಗಾಯವಾಗಿದೆ. ಚಿಂತಾಮಣಿ ತಾಲೂಕಿನ ಕಣಿಶೆಟ್ಟಿಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಗಲಾಟೆಯಲ್ಲಿ ಜೆಡಿಎಸ್ ಕಾರ್ಯಕರ್ತ ಗೋವರ್ಧನ್ ಬೆರಳುಗಳು ಕಟ್ ಆಗಿದ್ದು ತಲೆಗೆ ಗಂಭೀರವಾದ ಗಾಯವಾಗಿದೆ. ಸದ್ಯ ಗಾಯಾಳುವನ್ನು ಚಿಂತಾಮಣಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!