September 9, 2026
Wednesday, September 9, 2026
spot_img

ಸತೀಶ್ ಜಾರಕಿಹೊಳಿ ಮನೆ ಮೇಲಿನ ‘ಇಡಿ’ ದಾಳಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಹೊಸದಿಗಂತ ವರದಿ ಬೆಳಗಾವಿ:

ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ನಡೆದಿರುವ ದಾಳಿ ಹಾಗೂ ತನಿಖಾ ಸಂಸ್ಥೆಗಳ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ರಾತ್ರಿ ವೇಳೆ ಪ್ರತಿಭಟನೆ ನಡೆಸಿದರು.

ನಗರದಲ್ಲಿರುವ ಕಾಂಗ್ರೆಸ್ ಭವನದಲ್ಲಿ ಜಮಾಯಿಸಿದ ನೂರಾರು ಕಾಂಗ್ರೆಸ್ ಕಾರ್ಯಕರ್ತರು, ಆರ್ ಟಿಓ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟಿಸಿ, ಕೇಂದ್ರ ಸರ್ಕಾರ ಹಾಗೂ ತನಿಖಾ ಸಂಸ್ಥೆಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ರಾಜಕೀಯವಾಗಿ ವಿರೋಧಿಗಳನ್ನು ಗುರಿಯಾಗಿಸಿಕೊಂಡು ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶವನ್ನು ಹೋರಹಾಕಿದರು.

ಇದನ್ನೂ ಓದಿ:

ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲಿನ ದಾಳಿಗೆ ಸೂಕ್ತ ಕಾರಣಗಳನ್ನು ಬಹಿರಂಗಪಡಿಸಬೇಕು ಹಾಗೂ ತನಿಖೆಯ ಹೆಸರಿನಲ್ಲಿ ರಾಜಕೀಯ ಕಿರುಕುಳ ನೀಡುವುದನ್ನು ನಿಲ್ಲಿಸಬೇಕು ಎಂದು ಕಾರ್ಯಕರ್ತರು ಪ್ರತಿಭಟನೆಯ ವೇಳೆ ಒತ್ತಾಯಿಸಿದರು. ‌

ಈ ವೇಳೆ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು, ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !