ದಿನೇಶ್ ಗುಂಡೂರಾವ್‌ಗೆ ಮುತ್ತಿಗೆ ಹಾಕಿ ಬಿಸಿಮುಟ್ಟಿಸಿದ ಕಾಂಗ್ರೆಸ್ ಕಾರ್ಯಕರ್ತರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪಾಂಡಿಚೇರಿ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಸಭೆಗೆ ಬಂದಿದ್ದ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ ಘಟನೆ ನಡೆದಿದೆ.

ದಿನೇಶ್, ಪುದುಚೇರಿ ಕಾಂಗ್ರೆಸ್ ಉಸ್ತುವಾರಿ ಆಗಿದ್ದು, ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಭೆಗೆ ಹಾಜರಾಗಿದ್ದರು. ಈ‌ ಸಂದರ್ಭ ಮಾಜಿ ಸಚಿವರೊಬ್ಬರನ್ನ ಬೆಂಬಲಿಸುವ ಬಣವೊಂದು ಸ್ಥಳದಲ್ಲಿ ನಾಯಕತ್ವ ಬದಲಾವಣೆಗೆ ಆಗ್ರಹಿಸಿ ಧರಣಿ ನಡೆಸುತ್ತಿತ್ತು. ಸಭೆ ಮುಗಿಸಿ ದಿನೇಶ್ ಹೊರಬರುತ್ತಿದ್ದಂತೆಯೇ ಕಾಂಗ್ರೆಸ್ ಕಾರ್ಯಕರ್ತರು ಅವರನ್ನು ಸುತ್ತುವರಿದು ತಳ್ಳಾಡಿ ನಾಯಕತ್ವ ಬದಲಾವಣೆ ಕುರಿತು ಉತ್ತರ ನೀಡುವಂತೆ ಒತ್ತಾಯಿಸಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!