ಭ್ರಷ್ಟಾಚಾರದಲ್ಲಿ ಕಾಂಗ್ರೆಸ್​ ವಿಶ್ವ ದಾಖಲೆ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಭ್ರಷ್ಟಾಚಾರದಲ್ಲಿ ಕಾಂಗ್ರೆಸ್​ ವಿಶ್ವ ದಾಖಲೆ ಮಾಡಿದೆ ಎಂದು ಕೇಂದ್ರ ರೈಲ್ವೆ, ಸಂಪರ್ಕ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ (Ashwini Vaishnav) ಹೇಳಿದ್ದಾರೆ.

ದೇಶದಲ್ಲಿ ಪ್ರಧಾನಿ ಮೋದಿ ಸರಕಾರ ಅಧಿಕಾರಕ್ಕೆ ಬಂದ ನಂತರ ಭಾರತ ದೂರಸಂಪರ್ಕ ಕ್ಷೇತ್ರದಲ್ಲಿ ಅಪಾರ ಅಭಿವೃದ್ಧಿಯಾಗಿದೆ. ಆದ್ರೆ ಯುಪಿಎ ಸರ್ಕಾರದ ಅವಧಿಯಲ್ಲಿನ 2ಜಿ ಹಗರಣವನ್ನು ಎಂದೂ ನೆನಪಿಸಿಕೊಳ್ಳಬೇಡಿ ಎಂದರು.

ಮೋದಿ ಸರ್ಕಾರವು ಟೆಲಿಕಾಂ ಕ್ಷೇತ್ರವನ್ನು ಸನ್‌ರೈಸ್ ಸೆಕ್ಟರ್‌ಗೆ ಕೊಂಡೊಯ್ಯುತ್ತಿದ್ದಾರೆ.ಇಂದು, ಟೆಲಿಕಾಂ ಕ್ಷೇತ್ರದಲ್ಲಿ ಬೆಳವಣಿಗೆ ಮತ್ತು ಹೂಡಿಕೆ ಮತ್ತು ಪಾರದರ್ಶಕತೆ ಇದೆ. ದೇಶದಲ್ಲಿ ಮಾರಾಟವಾಗುವ ಒಟ್ಟು ಸ್ಮಾರ್ಟ್‌ಫೋನ್‌ಗಳಲ್ಲಿ ಶೇಕಡಾ 30-35 ರಷ್ಟು 5G ಸಂವಹನ ಸಾಮರ್ಥ್ಯವನ್ನು ಹೊಂದಿವೆ.

ಭಾರತವು 2029 ರ ವೇಳೆಗೆ 6G ನೆಟ್‌ವರ್ಕ್ ಮೂಲಸೌಕರ್ಯವನ್ನು ಪ್ರಾರಂಭಿಸುವ ನಿರೀಕ್ಷೆಯಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಈ ವರ್ಷದ ಮಾರ್ಚ್‌ನಲ್ಲಿ ಹೇಳಿದ್ದರು.

ಒಂದೆರಡು ಕಂಪನಿಗಳು ಮಾರುಕಟ್ಟೆಯಲ್ಲಿ ಪ್ರಾಬಲ್ಯ ಸಾಧಿಸುತ್ತಿವೆ ಎಂಬ ಗೌರವ್ ಗೊಗೊಯ್ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ವೈಷ್ಣವ್ ಅವರು ಯುಪಿಎ ಅವಧಿಯಲ್ಲಿ ನಡೆದ 2G ಹಗರಣ ಮತ್ತು ಟೆಲಿಕಾಂ ಕ್ಷೇತ್ರವನ್ನು ವಿಶೇಷವಾಗಿ BSNLನ್ನು ಸರ್ಕಾರವು ಹಾಳುಮಾಡಿರುವುದು ಎಲ್ಲರಿಗೂ ನೆನಪಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!